Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯಾದ್ಯಂತ ಬಿ – ಖಾತಾ ಆಸ್ತಿಗೆ ದುಪ್ಪಟ್ಟು ತೆರಿಗೆ; ಕರಡು ನಿಯಮ ಹೊರಡಿಸಿದ ಸರ್ಕಾರ
ಕರ್ನಾಟಕಪ್ರಮುಖ

ರಾಜ್ಯಾದ್ಯಂತ ಬಿ – ಖಾತಾ ಆಸ್ತಿಗೆ ದುಪ್ಪಟ್ಟು ತೆರಿಗೆ; ಕರಡು ನಿಯಮ ಹೊರಡಿಸಿದ ಸರ್ಕಾರ

Share
2 Min Read
SHARE

newsics.com

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನಿಯಮಾನುಸಾರ ಆಸ್ತಿ ತೆರಿಗೆ ಮತ್ತು ನಾನಾ ಶುಲ್ಕಗಳ ದರ ಪರಿಷ್ಕರಣೆ, ಹೊಸ ತೆರಿಗೆ ಅಂಶಗಳ ಸೇರ್ಪಡೆ ಹಾಗೂ ‘ಬಿ-ಖಾತಾ’ ಪಡೆದ ಆಸ್ತಿಗಳಿಂದ ಮೊದಲ ವರ್ಷ ದುಪ್ಪಟ್ಟು ಆಸ್ತಿ ತೆರಿಗೆ ಸಂಗ್ರಹ ಪ್ರಸ್ತಾವ ಒಳಗೊಂಡ ಕರಡು ನಿಯಮವನ್ನು ಸರ್ಕಾರ ಹೊರಡಿಸಿದೆ.

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ಗ್ರಾಮ ಪಂಚಾಯತಿಗಳ ತೆರಿಗೆ, ದರ ಮತ್ತು ಫೀಸುಗಳು) ಕರಡು ನಿಯಮ- 2025′ ಅನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಶುಕ್ರವಾರ ಹೊರಡಿಸಿದೆ. ಆಕ್ಷೇಪಣೆ ಸಲ್ಲಿಕೆಗೆ 15 ದಿನಗಳ ಕಾಲಾವಕಾಶ ನೀಡಲಾಗಿದ್ದು, ನಂತರ ಆಕ್ಷೇಪಣೆಗಳನ್ನು ಪರಿಶೀಲಿಸಿ ನಿಯಮದಲ್ಲಿಬದಲಾವಣೆ ತಂದು ಅಂತಿಮ ಅಧಿಸೂಚನೆ ಹೊರಡಿಸಲಿದೆ.

ಈ ಹಿಂದೆ ಅಂದರೆ 2021ರಲ್ಲಿ ಗ್ರಾಪಂ ವ್ಯಾಪ್ತಿಯಲ್ಲಿಆಸ್ತಿ ತೆರಿಗೆ ಹಾಗೂ ನಾನಾ ಶುಲ್ಕಗಳ ಪರಿಷ್ಕರಣೆ ತರುವಾಯ ಸದ್ಯ ತೆರಿಗೆ ಪರಿಷ್ಕರಣೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಮುಂದಾಗಿದೆ. ಸದ್ಯ ಗ್ರಾಪಂ ವ್ಯಾಪ್ತಿಯಲ್ಲಿಆಸ್ತಿ ತೆರಿಗೆಯಿಂದ ವಾರ್ಷಿಕ 1,500 ಕೋಟಿ ರೂ. ಆದಾಯ ಸಂಗ್ರಹವಾಗುತ್ತಿದೆ. ‘ಬಿ-ಖಾತಾ’ ಸ್ವತ್ತುಗಳಿಗೆ ದುಪ್ಪಟ್ಟು ತೆರಿಗೆ ಸೇರಿದಂತೆ ಹೊಸ ತೆರಿಗೆ ಪ್ರಸ್ತಾವಗಳಿಂದ ದರ ಪರಿಷ್ಕರಣೆಯಾಗಿ ಜಾರಿಯಾದರೆ ವಾರ್ಷಿಕ 5000 ಕೋಟಿ ರೂ.ನಷ್ಟು ಆದಾಯ ಸಂಗ್ರಹವಾಗುವ ನಿರೀಕ್ಷೆ ಇದೆ.

ಗ್ರಾಪಂ ವ್ಯಾಪ್ತಿಯಲ್ಲಿ ಏಕರೂಪದ ತೆರಿಗೆ, ಶುಲ್ಕ ವಿಧಿಸುವ ಅಂಶವನ್ನು ಕರಡು ನಿಯಮಾವಳಿಯಲ್ಲಿ ಪ್ರಸ್ತಾಪಿಸಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಪ್ರತಿ ವಸತಿ, ವಸತಿಯೇತರ ಕಟ್ಟಡ, ವಾಣಿಜ್ಯ ಉದ್ದೇಶದ ಭೂಮಿ ಸೇರಿದಂತೆ ಇನ್ನಿತರ ಸ್ವತ್ತುಗಳಿಗೆ ಆಸ್ತಿ ಗುರುತಿನ ಸಂಖ್ಯೆ (ಪಿಐಡಿ) ನೀಡಿ, ನೋಂದಣಿ ಮಾಡುವಂತೆಯೂ ಪಿಡಿಒಗಳಿಗೆ ನಿರ್ದೇಶನ ನೀಡುವ ಅಂಶವೂ ಇದೆ. ಹಾಗೆಯೇ, ವಸತಿ, ವಾಣಿಜ್ಯ ಕಟ್ಟಡಗಳು, ನಿವೇಶನ, ವಾಣಿಜ್ಯ ಉದ್ದೇಶದ ಭೂಮಿ, ಆಪ್ಟಿಕಲ್‌ ಫೈಬರ್‌ ಕೇಬಲ್‌ (ಒಎಫ್‌ಸಿ), ಮೊಬೈಲ್‌ ಟವರ್‌ ಸೇರಿದಂತೆ ಇನ್ನಿತರ ಆಸ್ತಿಗಳ ಸಂಬಂಧ ಪ್ರತ್ಯೇಕ ಶುಲ್ಕ ವಿಧಿಸುವ ಪ್ರಸ್ತಾಪವಿದೆ.

ಈವರೆಗೆ ಗ್ರಾಪಂ ವ್ಯಾಪ್ತಿಯಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಮತಿ ಶುಲ್ಕ, ವ್ಯಾಪಾರ- ವಾಣಿಜ್ಯ ಚಟುವಟಿಕೆ ನಡೆಸಲು ಅನುಮತಿ ಶುಲ್ಕ, ಕೈಗಾರಿಕೆ ಘಟಕಗಳ ಸ್ಥಾಪನೆಗೆ ಅನುಮತಿ ಶುಲ್ಕ ವಿಧಿಸುವ ಬಗ್ಗೆ ಸ್ಪಷ್ಟತೆ ಇರಲಿಲ್ಲ. ಇದೀಗ ಮಾರ್ಗಸೂಚಿ ದರದಂತೆ ಚದರ ಮೀಟರ್‌ ಆಧಾರದಲ್ಲಿವೈಜ್ಞಾನಿಕವಾಗಿ ಶುಲ್ಕ ವಿಧಿಸುವ ಪ್ರಸ್ತಾಪವೂ ಇದೆ ಎಂದು ಮೂಲಗಳು ಹೇಳಿವೆ.

ದೇಶದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ವೈದ್ಯಕೀಯ ಕಾಲೇಜು ಹಗರಣ ಬಯಲು; ಕರ್ನಾಟಕದ ಇಬ್ಬರ ವಿರುದ್ಧ ಎಫ್‌ಐಆ‌ರ್

TAGGED:Double tax on B-khata property across the state; Government issues draft rules
Share This Article
Facebook Twitter Copy Link Print
Previous Article ದೇಶದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ವೈದ್ಯಕೀಯ ಕಾಲೇಜು ಹಗರಣ ಬಯಲು; ಕರ್ನಾಟಕದ ಇಬ್ಬರ ವಿರುದ್ಧ ಎಫ್‌ಐಆ‌ರ್
Next Article Today’s prediction ಇಂದಿನ ರಾಶಿ ಭವಿಷ್ಯ, 07-07-2025, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?