newsics.com
ಬೆಳಗಾವಿ: ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿಯೂ ಮಳೆಯ ಅಬ್ಬರ ಜೋರಾಗಿದೆ. ಜುಲೈ 12ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಗಾವಿ ಸೇರಿದಂತೆ ನೆರೆಯ ಮಹಾರಾಷ್ಟ್ರ ರಾಜ್ಯದ ಘಟ್ಟ ಪ್ರದೇಶದಲ್ಲಿ ಮುಂದುವರೆದ ಮಳೆಯಿಂದಾಗಿ ಕರ್ನಾಟಕದ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗಿದ್ದು ಪ್ರವಾಹ ಆತಂಕ ಕಾಡುತ್ತಿದೆ. ಮತ್ತೆ ಮುಂಗಾರು ಚುರುಕುಗೊಂಡಿದ್ದು ಮುಂದಿನ 5 ದಿನಗಳವರೆಗೆ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 7 ರಿಂದ ಜುಲೈ 11 ರವರೆಗೆ ಯೆಲ್ಲೋ ಅಲರ್ಟ್ ಅನ್ನು ಘೋಷಿಸಲಾಗಿದೆ. ಕರ್ನಾಟಕ ರಾಜ್ಯದ ಕೆಲವು ಕಡೆ ಗಾಳಿಯ ವೇಗ ಪ್ರತಿ ಗಂಟೆಗೆ 40 ರಿಂದ 50 ಕಿಲೋಮೀಟರ್ ಇರುವ ಹೆಚ್ಚಿನ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯಾದ್ಯಂತ ಜುಲೈ 17 ರಿಂದ ಜುಲೈ 31 ರವರೆಗೆ ಮಳೆಯ ಪ್ರಮಾಣ ವಾಡಿಕೆಗಿಂತ ಹೆಚ್ಚಿಗೆ ಆಗುವ ಹೆಚ್ಚಿನ ಮಳೆ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಜುಲೈ 7 ರಿಂದ ಜುಲೈ 11 ರವರೆಗೆ ಕೆಲವು ಕಡೆ ಮಾತ್ರ ಹಗುರವಾಗಿ ಮಳೆಯಾಗುವ ಹೆಚ್ಚಿನ ಸಾಧ್ಯತೆ ಇದೆ.