newsics.com
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಮಳೆ ದುರ್ಬಲವಾಗಿರಲಿದ್ದು, ಜುಲೈ ಕೊನೆ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂಗಾರು ಆರಂಭದಲ್ಲಿ ಅಬ್ಬರಿಸಿದ ಮಳೆ ಕ್ರಮೇಣ ದುರ್ಬಲಗೊಳ್ಳುತ್ತಿದ್ದು, ಮುಂದಿನ ಒಂದು ವಾರ ಕಾಲ ಮಳೆ ಕಡಿಮೆ ಆಗಲಿದೆ.
ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಭಾರೀ ಮೋಡ ಹಾಗೂ ಗಾಳಿ ಕಂಡು ಬಂದರೂ ನಿರೀಕ್ಷೆಯಷ್ಟು ಮಳೆ ಇರುವುದಿಲ್ಲ.
ಮುಂಗಾರು ಮಾರುತಗಳು ಇದೀಗ ಉತ್ತರ ಭಾರತ ಕಡೆ ವಾಲಿವೆ. ಒಡಿಶಾಕ್ಕೆ ಮುಂಗಾರು ಪ್ರವೇಶವಾಗಿರುವಾಗ ದಕ್ಷಿಣ ಭಾರತದಲ್ಲಿ ಮಳೆ ಕಡಿಮೆಯಾಗಿದೆ. ತಮಿಳುನಾಡಿನಲ್ಲಿ ಮುಂಗಾರು ಕೊರತೆ ಆಗಿದೆ. ಇನ್ನೂ ತಮಿಳುನಾಡಿಗೆ ಹೊಂದಿಕೊಂಡಿರುವ ಕರ್ನಾಟಕ ಪ್ರದೇಶದಲ್ಲೂ ಅದೇ ಪರಿಸ್ಥಿತಿ ಉಂಟಾಗಿದೆ. ಒಂದು ವಾರದ ಮಟ್ಟಿಗೆ ಮಳೆ ಕ್ಷೀಣಿಸಲಿದ್ದು, ಆ ಬಳಿಕ ಚುರುಕುಗೊಳ್ಳುವ ಸಾಧ್ಯತೆ ಇದೆ. ಜುಲೈ ಕೊನೇ ವಾರ ಹಾಗೂ ಆಗಸ್ಟ್ ಮೊದಲ ವಾರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ತಜ್ಞ ಶ್ರೀನಿವಾಸ್‌ರೆಡ್ಡಿ ಮಾಹಿತಿ ನೀಡಿದ್ದಾರೆ.