Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇಶದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ವೈದ್ಯಕೀಯ ಕಾಲೇಜು ಹಗರಣ ಬಯಲು; ಕರ್ನಾಟಕದ ಇಬ್ಬರ ವಿರುದ್ಧ ಎಫ್‌ಐಆ‌ರ್
ಕರ್ನಾಟಕಪ್ರಮುಖ

ದೇಶದ ಇತಿಹಾಸದಲ್ಲಿಯೇ ಅತ್ಯಂತ ದೊಡ್ಡ ವೈದ್ಯಕೀಯ ಕಾಲೇಜು ಹಗರಣ ಬಯಲು; ಕರ್ನಾಟಕದ ಇಬ್ಬರ ವಿರುದ್ಧ ಎಫ್‌ಐಆ‌ರ್

Share
1 Min Read
SHARE

newsics.com

ಹೊಸದಿಲ್ಲಿ: ದೇಶದಲ್ಲೇ ಅತಿದೊಡ್ಡದು ಎನ್ನಲಾಗಿರುವ ವೈದ್ಯಕೀಯ ಕಾಲೇಜುಗಳ ಹಗರಣವೊಂದನ್ನು ಸಿಬಿಐ ಬಯಲು ಮಾಡಿದ್ದು. ಇದರಲ್ಲಿ ಭಾಗಿಯಾಗಿರುವ ಆರೋಪದ ಮೇರೆಗೆ ಕರ್ನಾಟಕದ ಇಬ್ಬರು ವೈದ್ಯರು ಸಹಿತ 35 ಮಂದಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಾಧ್ಯಾಪಕ ಮತ್ತು ಮೂಳೆ ವಿಭಾಗದ ಮುಖ್ಯಸ್ಥ ಡಾ। ಸಿ.ಎನ್.ಮಂಜಪ್ಪ, ಬೆಂಗಳೂರಿನಲ್ಲಿರುವ ಅವರ ಆಪ್ತ ವೈದ್ಯ ಡಾ। ಸತೀಶ್ ವಿರುದ್ಧ ಆರೋಪಗಳು ಕೇಳಿಬಂದಿವೆ. ವೈದ್ಯಕೀಯ ಕಾಲೇಜುಗಳಿಗೆ ಅನುಕೂಲಕರ ವರದಿ ನೀಡಲು ಆ ಕಾಲೇಜುಗಳಿಂದ ತಲಾ 55 ಲಕ್ಷ ರೂ. ಲಂಚ ಪಡೆಯಲಾಗುತ್ತಿತ್ತು ಎಂಬುದು ಆರೋಪ.

ಹಗರಣದಲ್ಲಿ ಛತ್ತೀಸ್‌ಗಢದ ಸ್ವಘೋಷಿತ ದೇವಮಾನವ ರಾವತುರ ಸರ್ಕಾರ್ ಹೆಸರೂ ಕೇಳಿಬಂದಿದ್ದು ಕೆಲವು ಹಿರಿಯ ಅಧಿಕಾರಿಗಳು, ಮಧ್ಯವರ್ತಿಗಳು, ಉನ್ನತ ಶಿಕ್ಷಣ ತಜ್ಞರು ಸಹಿತ 35 ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಅವರಲ್ಲಿ ಮಾಜಿ ಯುಜಿಸಿ ಅಧ್ಯಕ್ಷ ಡಿ.ಪಿ. ಸಿಂಗ್‌ ಮತ್ತು ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮಾಜಿ ಅಧ್ಯಕ್ಷ ಸಂಜಯ್ ಶುಕ್ಲಾ ಕೂಡ ಸೇರಿದ್ದಾರೆ.

ದೇಶಾದ್ಯಂತ 40ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳು ಅಕ್ರಮ ಮಾನ್ಯತೆ ಪಡೆದಿರಬಹುದು ಎಂದು ಶಂಕಿಸಲಾಗಿದೆ. ಅಚ್ಚರಿಯೆಂದರೆ ಈ ಹಗರಣದಲ್ಲಿ ಆರೋಗ್ಯ ಸಚಿವಾಲಯದ ಕೆಲವು ಅಧಿಕಾರಿಗಳೂ ಶಾಮೀಲಾಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಈ ಬಹುಕೋಟಿ ಹಗರಣವು ರಾಜಸ್ಥಾನ, ಗುರುಗ್ರಾಮ್, ಇಂದೋರ್, ವಾರಂಗಲ್, ವಿಶಾಖಪಟ್ಟಣಂ ಸಹಿತ ಅನೇಕ ರಾಜ್ಯಗಳಲ್ಲಿ ವ್ಯಾಪಿಸಿದೆ. ಕಳಪೆ ಮಟ್ಟದ ವೈದ್ಯಕೀಯ ಕಾಲೇಜುಗಳಿಗೆ ಅಕ್ರಮ ಅನುಮೋದನೆಗಳನ್ನು ಪಡೆಯಲು ನಕಲಿ ಅಧ್ಯಾಪಕರು, ಸುಳ್ಳು ತನಿಖೆಗಳು ಮತ್ತು ಗೌಪ್ಯ ಸೂಕ್ಷ್ಮ ಮಾಹಿತಿಗಳ ಸೋರಿಕೆ ಮಾಡಿ ಕೋಟ್ಯಂತರ ರೂಪಾಯಿಗಳನ್ನು ಹವಾಲಾ ಮತ್ತು ಬ್ಯಾಂಕಿಂಗ್ ಮಾರ್ಗಗಳ ಮೂಲಕ ವಿನಿಮಯ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ರಾಯ್ಪುರದ ವೈದ್ಯಕೀಯ ಸಂಸ್ಥೆಯಲ್ಲಿ 55 ಲಕ್ಷ ರೂಪಾಯಿ ಲಂಚ ಪ್ರಕರಣದಿಂದ ಆರಂಭವಾದ ತನಿಖೆ ಈಗ ರಾಷ್ಟ್ರ ಮಟ್ಟದ ಹಗರಣವನ್ನು ಬಯಲಿಗೆಳೆದಿದೆ.

Karnataka government ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ಸರ್ಕಾರ ನಿರ್ಧಾರ

TAGGED:The biggest medical college scam in the country's history has come to light; FIR against two people from Karnataka
Share This Article
Facebook Twitter Copy Link Print
Previous Article Today’s almanac ಇಂದಿನ ಪಂಚಾಂಗ, 07-07-2025, ಸೋಮವಾರ
Next Article ರಾಜ್ಯಾದ್ಯಂತ ಬಿ – ಖಾತಾ ಆಸ್ತಿಗೆ ದುಪ್ಪಟ್ಟು ತೆರಿಗೆ; ಕರಡು ನಿಯಮ ಹೊರಡಿಸಿದ ಸರ್ಕಾರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?