Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ‘ಯೂನಿಟ್ ಟೆಸ್ಟ್’ ಪದ್ಧತಿ ಜಾರಿ; ಪರೀಕ್ಷಾ ನೀತಿಯ ಬದಲಾವಣೆಗಳೇನು?
ಕರ್ನಾಟಕಪ್ರಮುಖ

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲೂ ‘ಯೂನಿಟ್ ಟೆಸ್ಟ್’ ಪದ್ಧತಿ ಜಾರಿ; ಪರೀಕ್ಷಾ ನೀತಿಯ ಬದಲಾವಣೆಗಳೇನು?

Share
2 Min Read
SHARE

newsics.com

ಬೆಂಗಳೂರು: ಖಾಸಗಿ ಶಾಲೆಗಳಲ್ಲಿ ಇರುವಂತೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿಯೂ ಯೂನಿಟ್ ಟೆಸ್ಟ್ ಪದ್ಧತಿ ಜಾರಿಗೊಳಿಸಲು ಸರ್ಕಾರ ಕ್ರಮಕೈಗೊಂಡಿದೆ.

ಪಾಠ ಆಧಾರಿತ ಮೌಲ್ಯಾಂಕನ ಪರೀಕ್ಷೆ(LBA) ಅನುಷ್ಠಾನಗೊಳ್ಳಲಿದ್ದು, ವಿದ್ಯಾರ್ಥಿಗಳು ಪ್ರತಿ ಅಧ್ಯಯನ ಮುಗಿದ ನಂತರ ಕಿರುಪರೀಕ್ಷೆ ಬರೆಯಬೇಕಿದೆ.

ಸರ್ಕಾರಿ ಶಾಲೆಗಳಲ್ಲಿ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮೌಲ್ಯಮಾಪನ ಜಾರಿಯಲ್ಲಿದೆ.
ವಿದ್ಯಾರ್ಥಿಗಳಿಗೆ ಪ್ರತಿ ಅಧ್ಯಯನ ಮುಗಿದ ನಂತರ ಪರೀಕ್ಷೆ ಮಾಡುವುದರಿಂದ ಅರ್ಥೈಸಿಕೊಳ್ಳುವುದು, ಕಲಿಕೆಯ ಗುಣಮಟ್ಟದ ಬಗ್ಗೆ ಖಾತ್ರಿಗೆ ಅನುಕೂಲವಾಗುತ್ತದೆ ಎನ್ನುವ ಉದ್ದೇಶದಿಂದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪಾಠ ಆಧಾರಿತ ಮೌಲ್ಯಾಂಕನ ಪರೀಕ್ಷೆ ಜಾರಿಗೊಳಿಸುತ್ತಿದೆ. ಪ್ರಸಕ್ತ 2025- 26ನೇ ಶೈಕ್ಷಣಿಕ ಸಾಲಿನಿಂದಲೇ ಇದು ಜಾರಿಗೆ ಬರಲಿದೆ.

ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬೇಕಿದೆ. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಪಾಠ ಆಧಾರಿತ ಮೌಲ್ಯಾಂಕನ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಶಾಲೆಗಳಿಗೆ ನೀಡಲಿದೆ. ಶಾಲೆಗಳು ಇದರ ಆಧಾರದ ಮೇಲೆ ಪರೀಕ್ಷೆ, ಮೌಲ್ಯಾಂಕನ ನಡೆಸಿ ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ಅವರ ಸಾಧನೆಯ ಟ್ರ್ಯಾಕಿಂಗ್ ವ್ಯವಸ್ಥೆಯಲ್ಲಿ(SATS) ಅಪ್ಲೋಡ್ ಮಾಡಬೇಕಿದೆ.

ರಾಜ್ಯದಲ್ಲಿ 46, 757 ಸರ್ಕಾರಿ ಶಾಲೆಗಳಿದ್ದು, 42.92 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಆರಂಭದಿಂದಲೇ ವಿದ್ಯಾರ್ಥಿಗಳ ಮೌಲ್ಯಾಂಕನ ಮಾಡಿದಲ್ಲಿ ಮುಂಬರುವ ಬೋರ್ಡ್ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆಯಬಹುದೆಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ಈ ಯೋಜನೆ ರೂಪಿಸಿದೆ.

ವಿದ್ಯಾರ್ಥಿಗಳಲ್ಲಿ ಕಲಿಕೆ, ಗ್ರಹಿಕೆ ಮಟ್ಟವನ್ನು ಹೆಚ್ಚಳ ಮಾಡುವ ಉದ್ದೇಶದಿಂದ ಎಫ್‌ಎ ಮತ್ತು ಎಸ್‌ಎ ಜಾರಿಗೆ ತರಲಾಗಿದೆ. ಒಂದು ವರ್ಷದಲ್ಲಿ ಎಫ್‌ಎ -4, ಎಸ್‌ಎ-2 ನಡೆಸಲಾಗುತ್ತಿತ್ತು. ಈಗ ಪಾಠ ಆಧಾರಿತ ಮೌಲ್ಯಾಂಕನ ಹೆಸರಲ್ಲಿ ಹಳೆ ಪದ್ಧತಿಯನ್ನು ಶಿಕ್ಷಣ ಇಲಾಖೆ ಮತ್ತೆ ಅನುಷ್ಠಾನಗೊಳಿಸುತ್ತಿದೆ ಎನ್ನುವ ಅಭಿಪ್ರಾಯ ಕೂಡ ಕೇಳಿ ಬಂದಿದೆ.

ಪ್ರತಿ ಪರೀಕ್ಷೆ 30 ಅಂಕಗಳಿಗೆ ಮೀಸಲಾಗಿದ್ದು, 25 ಪ್ರಶ್ನೆಗಳು ಇರುತ್ತವೆ. ಇವುಗಳಲ್ಲಿ ಸುಲಭ ಶೇಕಡ 75, ಸಾಮಾನ್ಯ ಶೇಕಡ 25, ಕಠಿಣ ಶೇಕಡ 10 ಎನ್ನುವ ಮಾದರಿಯಲ್ಲಿ ಪ್ರಶ್ನೆಗಳನ್ನು ವಿಭಜಿಸಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಲಾಗುವುದು. ಬಹುತೇಕ ಪ್ರಶ್ನೆಗಳು ಬಹು ಆಯ್ಕೆ ಮಾದರಿಗಳಿಂದ ಕೂಡಿರುತ್ತವೆ.

ಎಸ್‌ಎಸ್‌ಎಲ್ಸಿ ಪ್ರಶ್ನೆ ಪತ್ರಿಕೆ ಸ್ವರೂಪ ಕೂಡ ಬದಲಾಗಲಿದೆ. ಬಹು ಆಯ್ಕೆ ಮಾದರಿ, ಒಂದು ವಾಕ್ಯದಲ್ಲಿ ಉತ್ತರಿಸಿ, ಮೂರು ಅಥವಾ ನಾಲ್ಕು ವಾಕ್ಯಗಳಲ್ಲಿ ಉತ್ತರಿಸಿ, ಸಂದರ್ಭ ಮತ್ತು ಸ್ವಾರಸ್ಯ, 8 ಅಥವಾ 10 ವಾಕ್ಯಗಳಲ್ಲಿ ಉತ್ತರಿಸಿ, ಗದ್ಯಭಾಗ ಓದಿ ಉತ್ತರ ಬರೆಯುವಂತಹ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಎಂದು ಹೇಳಲಾಗಿದೆ.

Kantara Chapter-1 ಅ.2 ರಂದು ‘ಕಾಂತಾರ- ಚಾಪ್ಟರ್ 1’ ರಿಲೀಸ್

TAGGED:'Unit Test' system implemented in all government schools in the state; What are the changes in the testing policy?
Share This Article
Facebook Twitter Copy Link Print
Previous Article Kantara Chapter-1 ಅ.2 ರಂದು ‘ಕಾಂತಾರ- ಚಾಪ್ಟರ್ 1’ ರಿಲೀಸ್
Next Article Gold Rate Today Bangalore: ಏರುಗತಿಯಲ್ಲಿದ್ದ ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?