Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > adhar problem 12 ವರ್ಷದ ಈ ಬಾಲಕಿಗೆ ಆಧಾರ್ ಕಾರ್ಡೇ ಇಲ್ಲ! ಶಾಲೆಗೆ ಹೋಗಲು ನಿತ್ಯ 30 ರೂ. ಬಸ್ ಚಾರ್ಜ್, ಏನು ಕಾರಣ?
ಕರ್ನಾಟಕಪ್ರಮುಖ

adhar problem 12 ವರ್ಷದ ಈ ಬಾಲಕಿಗೆ ಆಧಾರ್ ಕಾರ್ಡೇ ಇಲ್ಲ! ಶಾಲೆಗೆ ಹೋಗಲು ನಿತ್ಯ 30 ರೂ. ಬಸ್ ಚಾರ್ಜ್, ಏನು ಕಾರಣ?

Share
1 Min Read
SHARE

newsics.com

ಚಾಮರಾಜನಗರ: ಈ ಸೋಲಿಗ ಬಾಲಕಿಗೆ 12 ವರ್ಷ ವಯಸ್ಸು. ಸತತ ಪ್ರಯತ್ನದ ಬಳಿಕವೂ ಈಕೆಗೆ ಆಧಾರ್ ಕಾರ್ಡ್ ಸಿಗದ್ದರಿಂದ ನಿತ್ಯವೂ ಹಣ ಕೊಟ್ಟು ಬಸ್‌ನಲ್ಲಿ ಓಡಾಡುವ ದುಸ್ಥಿತಿ ನಿರ್ಮಾಣವಾಗಿದೆ.

ಆಧಾರ್ ಕಾರ್ಡ್ ಸಿಗದ್ದರಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಉಚಿತ ಬಸ್ ಪ್ರಯಾಣ, ಬ್ಯಾಂಕ್ ಖಾತೆ ತೆರೆಯಲು ಸಾಧ್ಯವಾಗುತ್ತಿಲ್ಲ. ಇದರಿಂದ ಯಾವುದೇ ಸರ್ಕಾರಿ ಸವಲತ್ತು ಸಿಕ್ತಿಲ್ಲ.

ಶಾಲೆಗೆ ಹೋಗಲೂ ನಿತ್ಯ 30 ರೂ. ಬಸ್ ಚಾರ್ಜ್ ಕೊಟ್ಟು ಓಡಾಡಬೇಕಾಗಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌಳೇಹಳ್ಳ ಡ್ಯಾಂ ನಿವಾಸಿ ಎಸ್ ಚೈತ್ರ ದುಸ್ಥಿತಿಯಿದು. ಬಾಲಕಿ ಚೈತ್ರಾ ಲೊಕ್ಕನಹಳ್ಳಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ನಿತ್ಯವೂ ಶಾಲೆಗೆ ಕೌಳೇಹಳ್ಳದಿಂದ ಲೊಕ್ಕನಹಳ್ಳಿಗೆ ಸಂಚರಿಸಬೇಕಿದೆ. ಇದಕ್ಕಾಗಿ ನಿತ್ಯ 30 ರೂಪಾಯಿ ಖರ್ಚು ಮಾಡುವ ಪರಿಸ್ಥಿತಿ ಇದೆ.

ಪುಟ್ಟ ಹೆಣ್ಣು ಮಗುವಿನಿಂದ ಹಿಡಿದು ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಕ್ತಿ ಯೋಜನೆಯಲ್ಲಿ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಇದೆ. ಆದರೆ ಈ ಸೋಲಿಗ ಬಾಲಕಿಗೆ ಮಾತ್ರ ಉಚಿತ ಪ್ರಯಾಣದ ಭಾಗ್ಯವಿಲ್ಲ. ಪ್ರತಿದಿನವೂ 30 ರೂಪಾಯಿ ಬಸ್ ಚಾರ್ಜ್ ತೆತ್ತು ಶಾಲೆಗೆ ಹೋಗಿಬರುವ ಪರಿಸ್ಥಿತಿ ಇದೆ. ಮೊದಲೇ ಬಡ ವಿದ್ಯಾರ್ಥಿ. ಉಚಿತ ಸೌಲಭ್ಯದಿಂದ ವಂಚಿತವಾಗಿದ್ದೇನೆ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ.
ಜಾತಿ ಹಾಗೂ ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಬ್ಯಾಂಕ್ ಖಾತೆ, ಬಸ್ ಪ್ರಯಾಣ ಎಲ್ಲದಕ್ಕೂ ಆಧಾರ್ ಕಾರ್ಡ್ ಬೇಕೇಬೇಕು. ಆದರೆ ಆಧಾರ್ ಕಾರ್ಡ್ ಇಲ್ಲದೆ ಎಲ್ಲ ಸೌಲಭ್ಯಗಳಿಂದ ವಂಚಿತಳಾಗಿದ್ದಾಳೆ.

ಮನೆಯಲ್ಲಿ ಹುಟ್ಟಿದ್ದೇ ತಪ್ಪಾಯ್ತು:

ಈ ಬಾಲಕಿ ಚೈತ್ರಾ ಮನೆಯಲ್ಲೇ ಜನಿಸಿದ್ದರಿಂದ ಬರ್ತ್ ಸರ್ಟಿಫಿಕೇಟ್ ಸಿಕ್ಕಿಲ್ಲ. ಬರ್ತ್ ಸರ್ಟಿಫಿಕೇಟ್ ಇಲ್ಲದೆ ಆಧಾರ್ ಕಾರ್ಡ್ ಕೊಡ್ತಿಲ್ಲ. ತಂದೆ ಬದುಕಿಲ್ಲ, ತಾಯಿ ಮಹದೇವಮ್ಮ ಕೂಲಿ ಕೆಲಸ ಮಾಡ್ತಿದ್ದಾಳೆ. ನಿತ್ಯ ಕೂಲಿ ಮಾಡಿ ಮಗಳಿಗೆ ಬಸ್ ಚಾರ್ಜ್ ಕೊಟ್ಟು ಕಳಿಸಬೇಕಾಗಿದೆ. ಕೂಡಲೇ ಆಧಾರ್ ಕಾರ್ಡ್ ಸೌಲಭ್ಯ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Ramayana ravana ರಾಮಾಯಣದಲ್ಲಿ ರಾವಣನಾಗಿ ಯಶ್ ಕಾಣಿಸಿಕೊಳ್ಳೋದೆಷ್ಟು ಸಮಯ? ಸಂಭಾವನೆ ಎಷ್ಟು? ಗಾಬರಿಯಾಗದಿರಿ…

TAGGED:12-year-old girl doesn't have Aadhaar card! Bus fare of Rs. 30 per day to go to school
Share This Article
Facebook Twitter Copy Link Print
Previous Article Ramayana ravana ರಾಮಾಯಣದಲ್ಲಿ ರಾವಣನಾಗಿ ಯಶ್ ಕಾಣಿಸಿಕೊಳ್ಳೋದೆಷ್ಟು ಸಮಯ? ಸಂಭಾವನೆ ಎಷ್ಟು? ಗಾಬರಿಯಾಗದಿರಿ…
Next Article Terror news ಉಗ್ರ ಕೃತ್ಯಕ್ಕೆ ಸಂಚು: ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ASI ಸೇರಿ ಮೂವರ ಬಂಧನ, NIA ಹೇಳಿದ್ದೇನು?

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?