Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ 33 ಅಂಕ ಸಾಕು, ಕನ್ನಡದ ಮಾರ್ಕ್ಸ್ ಕಡಿತ
ಕರ್ನಾಟಕಪ್ರಮುಖ

ಇನ್ಮುಂದೆ ಎಸ್‌ಎಸ್‌ಎಲ್‌ಸಿ ತೇರ್ಗಡೆಗೆ 33 ಅಂಕ ಸಾಕು, ಕನ್ನಡದ ಮಾರ್ಕ್ಸ್ ಕಡಿತ

Share
2 Min Read
SHARE

newsics.com

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಸಿಬಿಎಸ್‌ಇ ಮಾದರಿಯಲ್ಲೇಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ.

ರಾಜ್ಯ ಪಠ್ಯಕ್ರಮ ಅನುಸರಿಸುವ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ ಮಕ್ಕಳು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸಿಬಿಎಸ್‌ಇ ಮಾದರಿಯಲ್ಲೇ ಪರೀಕ್ಷೆ ಎದುರಿಸಬೇಕು.

ಕೆಎಸ್ಇಎಬಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಈಗಿರುವ 35 ರಿಂದ 33 ಕ್ಕೆ ಇಳಿಸಲು ಮತ್ತು ಪ್ರಥಮ ಭಾಷೆಗೆ ಪರೀಕ್ಷೆ ನಡೆಸುವ ಒಟ್ಟು ಅಂಕಗಳನ್ನು 125 ರಿಂದ 100 ಕ್ಕೆ ಇಳಿಸಲು ಶಿಫಾರಸು ಮಾಡಿದೆ.

 

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಫಲಿತಾಂಶ ಕುಸಿತ ಕಂಡ ನಂತರ, ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಅಸೋಸಿಯೇಟೆಡ್ ಮ್ಯಾನೇಜ್‌ಮೆಂಟ್, ರಾಜ್ಯ ಮಂಡಳಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ತಡೆಯಲು ಸಿಬಿಎಸ್‌ಇ ಮಾದರಿಯನ್ನು ಅಳವಡಿಸಿಕೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಮನವಿ ಸಲ್ಲಿಸಿತ್ತು.

ಸಿಬಿಎಸ್‌ಇ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಆಂತರಿಕ ಅಂಕಗಳೂ ಸೇರಿ ಒಟ್ಟಾರೆ ಶೇ 33 ಅಂಕ ಪಡೆದರೂ ತೇರ್ಗಡೆಯಾಗುತ್ತಾರೆ. ಪ್ರತಿ ವಿಷಯಕ್ಕೂ 20 ಆಂತರಿಕ ಅಂಕಗಳಿದ್ದು, 80 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗು ತ್ತದೆ. ಎರಡೂ ಸೇರಿ 100ಕ್ಕೆ ಕನಿಷ್ಠ 33 ಅಂಕ ಪಡೆದವರು ಉತ್ತೀರ್ಣರಾಗುತ್ತಾರೆ. ಇದೇ ಮಾದರಿಯನ್ನು ಎಸ್‌ಎಸ್‌ಎಲ್‌ಸಿಯಲ್ಲೂ ಅಳವಡಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ಸೇರಿ ಪ್ರಥಮ ಭಾಷೆಯನ್ನು125ಕ್ಕೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ದ್ವಿತೀಯ ಹಾಗೂ ತೃತೀಯ ಭಾಷಾ ವಿಷಯಗಳ ಪರೀಕ್ಷೆಯನ್ನು 100 ಅಂಕಗಳಿಗೆ ನಡೆಸಲಾಗುತ್ತದೆ. ಇದರಲ್ಲಿ ಪ್ರಥಮ ಭಾಷೆ 25 ಹಾಗೂ ಉಳಿದ ಇತರೆ ವಿಷಯಗಳಲ್ಲಿ ತಲಾ 20 ಅಂಕಗಳು ಆಂತರಿಕ ಮೌಲ್ಯಮಾಪನಕ್ಕೆ ನಿಗದಿ ಮಾಡಲಾಗಿದೆ. ಸಿಬಿಎಸ್‌ಇ ಮಾದರಿಯ ಹೊಸ ನಿಯಮ ಜಾರಿಯಾದರೆ ಒಬ್ಬ ವಿದ್ಯಾರ್ಥಿ ಒಂದು ವಿಷಯದಲ್ಲಿ 20 ಆಂತರಿಕ ಅಂಕ ಪಡೆದರೆ, ಲಿಖಿತ ಪರೀಕ್ಷೆಯಲ್ಲಿ 13 ಬಂದರೂ ಸಾಕು ಆ ವಿಷಯದಲ್ಲಿ ತೇರ್ಗಡೆಯಾಗುತ್ತಾನೆ.

ಕನ್ನಡ ಸೇರಿದಂತೆ ಎಸ್‌ಎಸ್‌ಎಲ್‌ಸಿ ಪ್ರಥಮ ಭಾಷಾ ಪರೀಕ್ಷೆಯ ಅಂಕವನ್ನು 125ರ ಬದಲು 100ಕ್ಕೆ ಸೀಮಿತಗೊಳಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದೆ.

ನಿವೃತ್ತ ಪ್ರಾಧ್ಯಾಪಕ ಗಣೇಶ್‌ ಭಟ್‌ ಅಧ್ಯಕ್ಷತೆಯಲ್ಲಿ ರಚಿಸಲಾಗಿ ರುವ ಪರೀಕ್ಷೆ ಸುಧಾರಣಾ ಸಮಿತಿಯು, ಮುಂಬರುವ ಎಸ್‌ಎಸ್‌ ಎಲ್‌ಸಿ ಪರೀಕ್ಷೆಯಲ್ಲಿ ಒಂದು ಅಂಕದ, ಬಹು ಆಯ್ಕೆಯ ಪ್ರಶ್ನೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅಳವಡಿಸಲು, ಪ್ರತಿ ವಿಭಾಗದಲ್ಲೂ ಹೆಚ್ಚು ಪ್ರಶ್ನೆಗಳನ್ನು ನೀಡಿ, ಯಾವುದಾದರೂ ಎರಡು, ಮೂರು, ನಾಲ್ಕು ಪ್ರಶ್ನೆಗಳನ್ನು ಆಯ್ಕೆ ಮಾಡಿಕೊಂಡು ಉತ್ತರ ಬರೆಯುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ನೀಡಲು ಸಮಿತಿ ಚರ್ಚೆ ನಡೆಸಿದೆ.

Share This Article
Facebook Twitter Copy Link Print
Previous Article Shubman Gill ಚೊಚ್ಚಲ ಟೆಸ್ಟ್​ ಗೆದ್ದ ಬೆನ್ನಲ್ಲೇ ವಿವಾದಲ್ಲಿ ಸಿಲುಕಿದ್ರಾ ನಾಯಕ ಗಿಲ್?
Next Article ಆಂಧ್ರದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ AI ಬಳಕೆ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?