newsics.com
ಐಪಿಎಲ್ 2025 ರಲ್ಲಿ ಆರ್ಸಿಬಿ ತಂಡದ ಪ್ರಮುಖ ಬೌಲರ್ ಆಗಿದ್ದ ಯಶ್ ದಯಾಳ್ ಅವರ ವಿರುದ್ಧ ಗಂಭೀರ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಲಾಗಿದೆ. ಗಾಜಿಯಾಬಾದ್ನ ಯುವತಿಯೊಬ್ಬಳು ದೂರು ದಾಖಲಿಸಿದ್ದು, ಮದುವೆಯ ಭರವಸೆ ನೀಡಿ ಆರ್ಥಿಕ ಮತ್ತು ಮಾನಸಿಕ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿದ್ದಾಳೆ.
ಕೆಲವು ದಿನಗಳ ಹಿಂದೆ, ಮದುವೆಯ ಆಮಿಷವೊಡ್ಡಿ ಯಶ್ ದಯಾಳ್ ಆರ್ಥಿಕ, ಮಾನಸಿಕ ಮತ್ತು ದೈಹಿಕ ಶೋಷಣೆ ಮಾಡಿದ್ದಾರೆ ಎಂದು ಆರೋಪಿಸಿ ಯುವತಿಯೊಬ್ಬಳು ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಸುದೀರ್ಘ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಳು. ಇದರಲ್ಲಿ ಯಶ್ ದಯಾಳ್ ಜೊತೆಗಿರುವ ಫೋಟೀವನ್ನು ಶೇರ್ ಮಾಡಿದ್ದಳು. ಅಲ್ಲದೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದ್ದು, ಈ ದೂರಿನಲ್ಲಿ ಯಶ್ ದಯಾಳ್ ಬಹಳ ವರ್ಷಗಳಿಂದ ನನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದ್ದರು ಎಂದು ಉಲ್ಲೇಖಸಿದ್ದಳು.
ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಯಶ್ ದಯಾಳ್ ವಿರುದ್ಧ ಹಲವಾರು ಗಂಭೀರ ಆರೋಪಗಳನ್ನು ಮಾಡಿದ್ದಳು. ಕಳೆದ 5 ವರ್ಷಗಳಿಂದ ಯಶ್ ದಯಾಳ್ ಜೊತೆ ಸಂಬಂಧ ಹೊಂದಿದ್ದಾಗಿ ಆಕೆ ತನ್ನ ದೂರಿನಲ್ಲಿ ತಿಳಿಸಿದ್ದಳು.
ಇದೀಗ ಪೊಲೀಸರು ಈ ವಿಷಯದಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆಗೆ ಮುಂದಾಗಿದ್ದಾರೆ.