newsics.com
ಮಹಿಳೆಯರ ಮತ್ತು ಯುವತಿಯರ ಅಶ್ಲೀಲ ಫೋಟೋಗಳನ್ನು ಹಾಗೂ ವೀಡಿಯೋಗಳನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡ್ತಿದ್ದ ಓರ್ವ ಆರೋಪಿಯನ್ನು ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೆ.ಆರ್. ಪುರಂ ನಿವಾಸಿಯಾದ ಗುರುದೀಪ್ ಸಿಂಗ್ ಎಂದು ಗುರುತಿಸಲಾಗಿದೆ.
ನಗರದ ಪ್ರಮುಖ ಸ್ಥಳಗಳಾದ ಚರ್ಚ್ ಸ್ಟ್ರೀಟ್, ಕೋರಮಂಗಲ ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಎನ್ನಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುವ ಮಹಿಳೆಯರ ಅನುಮತಿ ಪಡೆಯದೇ ವಿಡಿಯೋ ಹಾಗೂ ಫೋಟೋಗಳನ್ನು ಚಿತ್ರೀಕರಿಸಿ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡುತ್ತಿದ್ದ. ಅದರಂತೆ ಯುವತಿ ಒಬ್ಬರ ರೀಲ್ಸ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು.
ನಂತರ ಆ ಯುವತಿಗೆ ಅಪರಿಚಿತರಿಂದ ಅಸಭ್ಯ ಮೆಸೇಜ್ಗಳು ಬರಲು ಆರಂಭಿಸಿವೆ. ಗಾಬರಿಯಾದ ಅವರು ಸೋಶಿಯಲ್ ಮೀಡಿಯಾದಲ್ಲಿ ಏನಾಗಿದೆ ಅಂತಾ ಹುಡುಕಾಟ ನಡೆಸಿದಾಗ ಸತ್ಯ ಗೊತ್ತಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯರಿಗೆ ಸಂಬಂಧಿಸಿದ ಅಸಭ್ಯ ಫೋಟೋಗಳು ಮತ್ತು ವೀಡಿಯೋಗಳು ವೈರಲ್ ಆಗುತ್ತಿರುವ ಬಗ್ಗೆ ಯುವತಿಯೊಬ್ಬಳು ಪೊಲೀಸರನ್ನು ಟ್ಯಾಗ್ ಮಾಡಿ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಬನಶಂಕರಿ ಪೊಲೀಸರು ಕೂಡಲೇ ಕ್ರಮ ಕೈಗೊಂಡು, ಆರೋಪಿಯನ್ನು ಗುರುತಿಸಿ ಬಂಧಿಸಿದ್ದಾರೆ.