Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Disgusting behavior ಶಾಲೆಯ ಬಾತ್‌ರೂಮ್‌ನಲ್ಲಿ ರಕ್ತ: ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿ ಬೆತ್ತಲೆಗೊಳಿಸಿದ ಖಾಸಗಿ ಶಾಲೆ ಶಿಕ್ಷಕರು!
ದೇಶಪ್ರಮುಖ

Disgusting behavior ಶಾಲೆಯ ಬಾತ್‌ರೂಮ್‌ನಲ್ಲಿ ರಕ್ತ: ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿ ಬೆತ್ತಲೆಗೊಳಿಸಿದ ಖಾಸಗಿ ಶಾಲೆ ಶಿಕ್ಷಕರು!

Share
1 Min Read
SHARE

newsics.com

ಮುಂಬೈ: ಶಾಲೆಯ ಬಾತ್ ರೂಮ್‌ನಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ ಋತುಮತಿಯಾದ ಬಾಲಕಿ ಯಾರು ಎಂದು ಪತ್ತೆ ಹಚ್ಚಲು 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರನ್ನು ಶಿಕ್ಷಕರು ಬೆತ್ತಲೆಗೊಳಿಸಿದ ಆಘಾತಕಾರಿ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಹಪೂರ ಜಿಲ್ಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

ಶಾಲೆಯ ಬಾತ್ ರೂಮ್‌ನಲ್ಲಿ ರಕ್ತದ ಕಲೆಗಳು ಕಂಡುಬಂದಿವೆ. ಶಾಲೆಯ ಆಡಳಿತ ಮಂಡಳಿ ಋತುಮತಿಯಾದ ವಿದ್ಯಾರ್ಥಿನಿ ಯಾರು ಎಂದು ಪತ್ತೆ ಹಚ್ಚಲು ಇಂತಹ ವಿಪರೀತದ ಕೃತ್ಯಕ್ಕೆ ಮುಂದಾಗಿದೆ.

ಆರಂಭದಲ್ಲಿ ಶಿಕ್ಷಕರು ಋತುಮತಿ ಆಗಿರುವವರು ಯಾರು ಎಂದು ಪ್ರಶ್ನಿಸಿದ್ದಾರೆ. ಆದರೆ ಬಾಲಕಿಯರು ಹೇಳಿಕೊಳ್ಳಲು ಮುಜುಗರ ಪಟ್ಟುಕೊಂಡಿದ್ದಾರೆ. ಇದರಿಂದ ಕೆಲವರ ಬಟ್ಟೆ ಬಿಚ್ಚಿಸಿದ್ದಾರೆ. ಅದರಲ್ಲೂ ಕೆಲವು ಬಾಲಕಿಯರ ಚೆಡ್ಡಿಯನ್ನೂ ಬಿಚ್ಚಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಬದಲು ಹೆಣ್ಣು ಮಕ್ಕಳ ನೈಸರ್ಗಿಕವಾದ ಋತುಮತಿಯನ್ನು ಪರೀಕ್ಷಿಸಿರುವುದು ಅಸಹ್ಯಕರ. ಪ್ರಿನ್ಸಿಪಾಲರು ಇಂತಹ ಕೆಲಸಗಳಿಗೆ ಕುಮ್ಮಕ್ಕು ನೀಡುತ್ತಿರುವುದು ವಿಷಾದನೀಯ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಲೆಯ ಆಡಳಿತ ಮಂಡಳಿಯ ನಡವಳಿಕೆಯಿಂದ ಆಘಾತಕ್ಕೆ ಒಳಗಾದ ಬಾಲಕಿಯರು ಮನೆಗೆ ಬಂದ ಕೂಡಲೇ ಪೋಷಕರ ಬಳಿ ದುಃಖ ಹಂಚಿಕೊಂಡಿದ್ದಾರೆ. ಕೂಡಲೇ ಶಾಲೆಗೆ ಆಗಮಿಸಿದ ಪೋಷಕರು ಶಿಕ್ಷಕರ ವಿರುದ್ಧ ಪ್ರತಿಭಟನೆ ನಡೆಸಿದ್ದೂ ಅಲ್ಲದೇ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಶಹಪೂರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

https://www.newsics.com/2025/07/10/prime-minister-returns-home-after-completing-5-nation-tour/

TAGGED:Blood in school bathroom: Private school teachers undress and strip female students naked!
Share This Article
Facebook Twitter Copy Link Print
Previous Article PM MODI 5 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Next Article ಶೂಟಿಂಗ್‌ ವೇಳೆ 40 ಅಡಿ ಬಾವಿಗೆ ಬಿದ್ದ ನಟಿ – ವಿಡಿಯೋ ನೋಡಿ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?