newsics.com
ನೈಋತ್ಯ ಮಾನ್ಸೂನ್ ಮತ್ತೆ ಚುರುಕು ಪಡೆದುಕೊಂಡಿದ್ದು ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ.ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜುಲೈ 14ರವರೆಗೆ ಅಂದ್ರೆ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ
ವಾಯುಭಾರ ಕುಸಿತದಿಂದ ಕೇರಳದಲ್ಲಿ ಭಾರೀ ಮಳೆಯಾಗ್ತಿದೆ. ಸೈಕ್ಲೋನ್ ಎಫೆಕ್ಟ್ ಕರ್ನಾಟಕದ ಮೇಲೂ ಆಗ್ತಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದೆ ಹವಾಮಾನ ಇಲಾಖೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆ ಹಿನ್ನೆಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಗಾಳಿ ಸಹಿತ ಹೆಚ್ಚಿನ ಮಳೆ ಹಿನ್ನೆಲೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.
https://www.newsics.com/2025/07/10/sandalwood-suffers-from-pan-india-cinema/