newsics.com
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ಗೆ ಎ1 ಆರೋಪಿ ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳು ವಿಚಾರಣೆಗೆ ಹಾಜರಾಗದೇ ಗೈರಾಗಿದ್ದರು. ಆರೋಪಿಗಳಾದ ಪವಿತ್ರಾ ಗೌಡ, ವಿನಯ್, ಧನರಾಜ್, ಕಾರ್ತಿಕ್ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಅರ್ಜಿ ವಿಚಾರಣೆಯನ್ನು 64ನೇ ಎಸಿಎಂಎಂ ನ್ಯಾಯಾಲಯ ಮುಂದೂಡಿದೆ.
ಆಗಸ್ಟ್.12 ರಂದು ಅರ್ಜಿ ವಿಚಾರಣೆ ಮುಂದೂಡಿರುವ ನ್ಯಾಯಾಲಯ, ಅಂದು ಕೋರ್ಟ್ ಗೆ ಎಲ್ಲಾ ಆರೋಪಿಗಳು ಹಾಜರಾಗಬೇಕು ಎಂದು ಸೂಚಿಸಿದೆ.
ರೇಣುಕಾಸ್ವಾಮಿ ಎಂಬುವವರು ಚಿತ್ರದುರ್ಗದಲ್ಲಿ ಕೊಲೆಗೀಡಾಗಿದ್ದರು. ಈ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಗೌಡ ಮತ್ತು ಇತರೆ ಸಂಬಂಧಿತರು ಆರೋಪಿಗಳಾಗಿ ಹೆಸರಾಗಿದ್ದಾರೆ. ಪೊಲೀಸ್ ತನಿಖೆಯಲ್ಲಿ ದರ್ಶನ್ ಸಹ ಆರೋಪಿಗಳ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದು, ನಂತರ ಅವರಿಗೆ ಜಾಮೀನು ನೀಡಲಾಗಿತ್ತು. ಆರೋಪಿಗಳಿಗೆ ಜಾಮೀನು ನೀಡುವಾಗ ಹೈಕೋರ್ಟ್ ಕಟ್ಟುನಿಟ್ಟಾದ ಷರತ್ತುಗಳನ್ನು ವಿಧಿಸಿತ್ತು.