newsics.com
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಭಟ್ಕಳ ಶಹರ ಠಾಣೆಗೆ ಬೆದರಿಕೆಯ ಇ-ಮೇಲ್ ಸಂದೇಶವನ್ನು ಕಳುಹಿಸಲಾಗಿದೆ.
ಇದೀಗ ಭಟ್ಕಳ ಶಹರ ಪೊಲೀಸ್ ಠಾಣೆಗೆ ಎರಡು ಬಾರಿ ಇ-ಮೇಲ್ ಮಾಡಿ ಭಟ್ಕಳ ನಗರವನ್ನು 24 ಗಂಟೆಯೊಳಗೆ ಸ್ಫೋಟಿಸುವ ಬೆದರಿಕೆ ಹಾಕಲಾಗಿದೆ. ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನ ವ್ಯಕ್ತಿಯಿಂದ ಜುಲೈ10ರ ಬೆಳಗ್ಗೆ 10 -30 ಕ್ಕೆ [email protected]ನಿಂದ ಭಟ್ಕಳ ಶಹರ ಠಾಣೆಗೆ ಇ-ಮೇಲ್ ಸಂದೇಶ ರವಾನೆಯಾಗಿದ್ದು, ಇಲಾಖೆಯಲ್ಲಿ ಹಾಗೂ ಜನರಲ್ಲಿ ಭೀತಿ ಸೃಷ್ಠಿಸಲು ಯತ್ನಿಸಲಾಗಿದೆ. ಭಟ್ಕಳ ಶಹರ ಠಾಣೆಯ [email protected] ಗೆ ಈಮೇಲ್ ಸಂದೇಶ ರವಾನೆಯಾಗಿದ್ದರಿಂದ ಎಚ್ಚೆತ್ತುಕೊಂಡಿರುವ ನಾಲ್ವೆಡೆ ಭಿಗಿ ಬಂದೋಬಸ್ತ್ ನಡೆಸಿದ್ದಾರೆ.
ಈ ಕುರಿತು ಭಟ್ಕಳ ಶಹರ ಠಾಣೆಯ ಪಿಎಸ್‌ಐ ನವೀನ್ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಇಂದು ಮುಂಜಾಗೃತ ಕ್ರಮವಾಗಿ ಭಟ್ಕಳ ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಜನನಿಬಿಡ ಪ್ರದೇಶದಲ್ಲಿ ಶ್ವಾನ ದಳ ಹಾಗೂ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಯಿತು.
https://www.newsics.com/2025/07/11/stampede-incident-near-chinnaswamy-stadium/