newsics.com
ಚಾಮರಾಜನಗರ : ಮಲೆ ಮಹದೇಶ್ವರ ವನ್ಯ ಧಾಮದಲ್ಲಿ 5 ಹುಲಿಗಳನ್ನು ವಿಷ ಹಾಕಿ ಕೊಂದಿದ್ದ ಪ್ರಕರಣ ಬೆನ್ನಲೇ ಕೊತ್ತಲವಾಡಿ ಬಳಿ ಚಿರತೆ ಶವ ಶುಕ್ರವಾರ ಪತ್ತೆಯಾಗಿದೆ. ಗಣಿ ತ್ಯಾಜ್ಯದ ಕಲ್ಲು ಸಂಗ್ರಹಿಸಿರುವ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ.
5 ವರ್ಷದ ಗಂಡು ಚಿರತೆ ಕಳೇಬರದ ಬಳಿ ನಾಯಿ ಮತ್ತು ಕರುವಿನ ಶವವೂ ಪತ್ತೆಯಾಗಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಮೇಲ್ನೋಟಕ್ಕೆ ಚಿರತೆಗೆ ವಿಷ ಹಾಕಿ ಕೊಂದಿರುವ ಶಂಕೆ ವ್ಯಕ್ತವಾಗಿದ್ದು ಚಿರತೆಯ ಸಾವಿನ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯುತ್ತಿದೆ. ಚಿರತೆ ನಾಯಿ ಹಾಗೂ ಕರುವಿನ ಕಲೆ ಬರೆದ ಸ್ಯಾಂಪಲ್ ಸಂಗ್ರಹ ಮಾಡಿದ್ದು ಲ್ಯಾಬ್ ಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಸ್ಥಳಕ್ಕೆ ಬಿಆರ್ಟಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೆಟಲ್ ಡಿಟೆಕ್ಟರ್ ಜೊತೆಗೆ ಶ್ವಾನದಳವೂ ಆಗಮಿಸಿ ತಪಾಸಣೆ ನಡೆಸಿದೆ. ಸದ್ಯ ಬಿಆರ್ಟಿ ಡಿಸಿಎಫ್ ಶ್ರೀಪತಿ ಹಾಗೂ ಸಿಸಿಎಫ್ ಹೀರಾಲಾಲ್ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.