newsics.com
ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದ ಮೊದಲ ದಿನ ರಿಷಭ್ ಪಂತ್ ಅವರು ಕೈ ಬೆರಳಿಗೆ ಗಾಯಗೊಂಡು ಪಂದ್ಯದಿಂದ ಹೊರಗುಳಿದಿದ್ದರು.ಪಂತ್ ಬದಲಿಗೆ ಧ್ರುವ್ ಜುರೇಲ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿದ್ದಾರೆ. ಪಂತ್ ಅವರ ಗಾಯ ಟೀಂ ಇಂಡಿಯಾಕ್ಕೆ ದೊಡ್ಡ ಹೊಡೆತವಾಗಿದೆ,
ಪಂತ್ ಬದಲಿಗೆ ಧ್ರುವ್ ಜುರೆಲ್ ಕೀಪಿಂಗ್ ಮಾಡಿದ್ದಾರೆ. ಪಂತ್ ಅವರ ಎಡಗೈ ತೋರು ಬೆರಳಿಗೆ ಗಾಯವಾಗಿದೆ ಎಂದು ಬಿಸಿಸಿಐ ತಿಳಿಸಿದೆ. ಉಪನಾಯಕ ರಿಷಭ್ ಪಂತ್ ಎಡಗೈ ತೋರು ಬೆರಳಿಗೆ ಗಾಯವಾಗಿದೆ. ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ. ಪಂತ್ ಅನುಪಸ್ಥಿತಿಯಲ್ಲಿ, ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್ ಮಾಡುತ್ತಿದ್ದಾರೆ ಎಂದು ಬಿಸಿಸಿಐ ಹೇಳಿದೆ
ಇಂಗ್ಲೆಂಡ್ ತಂಡದ ಮಾಜಿ ನಾಯಕ ನಾಸಿರ್ ಹುಸೇನ್ ಪಂತ್ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಎಡಗೈ ತೋರು ಬೆರಳಿನಲ್ಲಿ ಗಾಯವಾಗಿದೆ, ಉಗುರು ಮುರಿದಿದೆ. ಇದು ತುಂಬಾ ನೋವು ಉಂಟುಮಾಡುತ್ತದೆ. ಆದರೆ ಬೆರಳಿನಲ್ಲಿ ಯಾವುದೇ ಮುರಿತವಿಲ್ಲ, ಡ್ರೆಸ್ಸಿಂಗ್ ಕೋಣೆಯಲ್ಲಿ ಐಸ್ ಹಚ್ಚಿ ಚಿಕಿತ್ಸೆ ನೀಡಲಾಗುತ್ತಿದೆ. ರಿಷಭ್ ಪಂತ್ ಮೂರನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವ ಸಾಧ್ಯತೆ ಬಹಳ ಕಡಿಮೆ. ಅವರು ಬ್ಯಾಟಿಂಗ್‌ಗೆ ಬರಬಹುದು ಎಂದಿದ್ದಾರೆ.