newsics.com
ಬೆಂಗಳೂರು: ಜೂನ್ 4ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2025 ವಿಜಯೋತ್ಸವದ ಸಂದರ್ಭದಲ್ಲಿ ಭಾರೀ ಕಾಲ್ತುಳಿತ ಸಂಭವಿಸಿತ್ತು. ಈ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರ ಸಾವನಪ್ಪಿದ್ದರು ಮತ್ತು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ ಪ್ರಕರಣ ಸಂಬಂಧ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಅದರಂತೆ, ಕರ್ನಾಟಕ ಹೈಕೋರ್ಟ್ನ ನಿವೃತ್ತ ನ್ಯಾ. ಮೈಕೆಲ್ ಡಿ ಕುನ್ಹಾ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚನೆ ಮಾಡಿತ್ತು. ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ವರದಿ ಸಲ್ಲಿಸುವಂತೆ ಸರ್ಕಾರ ನಿರ್ದೇಶನ ನೀಡಿತ್ತು. ಅದರಂತೆ, ನಿವೃತ್ತ ನ್ಯಾ. ಮೈಕೆಲ್ ಡಿ ಕುನ್ಹಾ ಅವರು ಒಂದು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಮುಖ್ಯಮಂತ್ರಿಗಳ ಕಚೇರಿಯಲ್ಲಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದರು.
ವರದಿ ಸಂಬಂಧ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಲ್ತುಳಿತ ದುರಂತದ ಕುರಿತು ನಿವೃತ್ತ ನ್ಯಾ. ಮೈಕಲ್ ಡಿ ಕುನ್ಹಾ ಅವರು ತನಿಖೆ ನಡೆಸಿ ಇಂದು ಎರಡು ಸಂಪುಟದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ ಎಂದು ಹೇಳಿದರು. ಬರುವ ಗುರುವಾರ (ಜು. 17) ದಂದು ನಡೆಯುವ ಸಚಿವ ಸಂಪುಟದಲ್ಲಿ ವರದಿ ಮಂಡಿಸುತ್ತೇನೆ ಎಂದು ಹೇಳಿದರು.
https://www.newsics.com/2025/07/11/three-tiger-cubs-found-dead-in-bannerghatta-national-park/