newsics.com
ಮಂಡ್ಯ: ಚಾಕೊಲೇಟ್ ಕೊಡಿಸುವುದಾಗಿ ಹೇಳಿ 4 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಈ ಸಂಬಂಧ 21 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಾಕೋಲೇಟ್ ಕೊಡಿಸುವುದಾಗಿ ಹೇಳಿ ಮಗುವನ್ನು ಪುಸಲಾಯಿಸಿ ಕರೆದೊಯ್ದ ಕಾಮುಕ, ಅತ್ಯಾಚಾರವೆಸಗಿದ್ದ
ಸಂತ್ರಸ್ತ ಮಗುವಿನ ಪೋಷಕರು ಬಿಹಾರ ಮೂಲದವರೆಂದು ತಿಳಿದುಬಂದಿದೆ. ಇವರು ಕಳೆದೊಂದು ವರ್ಷದಿಂದ ಫ್ಲೈವುಡ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಆರೋಪಿಯು ಬಾಲಕಿಗೆ ಚಾಕ್ಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಸದ್ಯ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಯುತ್ತಿದೆ.