newsics.com
ನವದೆಹಲಿ : ದೆಹಲಿಯ ಸೀಲಾಮ್ ಪುರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಇಬ್ಬರು ಮೃತಪಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಶನಿವಾರ ಜುಲೈ 12 ರಂದ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಗಾಗಲೇ 14 ತಿಂಗಳ ಮಗು ಸೇರಿ 8 ಮಂದಿಯನ್ನ ರಕ್ಷಿಸಲಾಗಿದೆ. ಇನ್ನೂ 6ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, 7 ಅಗ್ನಿಶಾಮಕ ದಳದವರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ.
ಅಗ್ನಿಶಾಮಕ ಸಿಬ್ಬಂದಿಗಳು, ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಅವಶೇಷಗಳ ತೆರವು ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.