newsics.com
ಪಾಟ್ನಾ: ಪಾಟ್ನಾದಲ್ಲಿ ಮತ್ತೊಬ್ಬ ಬಿಜೆಪಿ ನಾಯಕನ ಹತ್ಯೆಯಾಗಿದೆ.ಬೈಕ್ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಶೇಕ್ಪುರದಲ್ಲಿನ ಬಿಜೆಪಿ ನಾಯಕ ಸುರೇಂದ್ರ ಕೆವಾತ್ ಅವರನ್ನು ಗುಂಡಿಕ್ಕಿ ಪರಾರಿಯಾಗಿದ್ದಾರೆ. ಗಂಭೀರ ಗಾಯಗೊಂಡಿದ್ದ ಕೆವಾತ್ ಅವರನ್ನು ಪಾಟ್ನಾದ ಏಮ್ಸ್ಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ಇನ್ನು ಘಟನೆ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿ ಕನ್ಹಯ್ಯಾ ಸಿಂಗ್, ಸುರೇಂದ್ರ ಕೆವಾತ್ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
ಸುರೇಂದ್ರ ಕೆವಾತ್ ಅವರು ಬಿಜೆಪಿ ಕಿಸಾನ್ ಮೋರ್ಚಾ ನಾಯಕರಾಗಿ ಸೇವೆ ಸಲ್ಲಿಸಿದ್ದರು.
https://www.newsics.com/2025/07/13/landslide-at-hulikal-ghati-heavy-vehicle-traffic-closed/