newsics.com
ಮೈಸೂರು: ಕರ್ನಾಟಕದ ಪತ್ರಿಕೋದ್ಯಮ ಕ್ಷೇತ್ರದ ದಿಗ್ಗಜ, ‘ಸ್ಟಾರ್ ಆಫ್ ಮೈಸೂರು’ ಮತ್ತು ‘ಮೈಸೂರು ಮಿತ್ರ’ ಪತ್ರಿಕೆಗಳ ಸಂಸ್ಥಾಪಕ-ಸಂಪಾದಕ ಡಾ. ಕೆ.ಬಿ. ಗಣಪತಿ (85) ಅವರು . ಮೈಸೂರಿನ ಕೆ.ಸಿ. ಲೇಔಟ್‌ನ ತಮ್ಮ ನಿವಾಸದಲ್ಲಿ ಇಂದು ಬೆಳಿಗ್ಗೆ ಉಂಟಾದ ಆಕಸ್ಮಿಕ ಹೃದಯಾಘಾತದಿಂದ ಅವರು ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ಕಳೆದ 50 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ.ಮೈಸೂರಿನ ಪತ್ರಿಕೋದ್ಯಮ ಕ್ಷೇತ್ರದ ದಿಗ್ಗಜರೆನಿಸಿಕೊಂಡಿರುವ ಕೆ.ಬಿ.ಗಣಪತಿ ರವರು ಸುಮಾರು 5 ದಶಕಗಳ ಕಾಲ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಪತ್ರಿಕಾರಂಗದ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಘನತೆಯನ್ನು ಎತ್ತರಕ್ಕೆ ಏರಿಸಿದ್ದಾರೆ.
ಕೆ.ಬಿ. ಗಣಪತಿ ಅವರ ‘ಅಬ್ರಕದಬ್ರಾ’ ಮತ್ತು ‘ಹೋಕಸ್ ಪೋಕಸ್’ ಕಾಲಂಗಳು ಓದುಗರಲ್ಲಿ ಅಪಾರ ಜನಪ್ರಿಯತೆ ಗಳಿಸಿದವು.ಕೆ.ಬಿ. ಗಣಪತಿ ಅವರಿಗೆ 2023ರಲ್ಲಿ ಮೈಸೂರು ವಿಶ್ವವಿದ್ಯಾನಿಲಯವು ಗೌರವ ಡಾಕ್ಟರೇಟ್ ಪದವಿಯನ್ನು ನೀಡಿತು.
https://www.newsics.com/2025/07/13/why-is-shruti-haasan-angry-about-marriage-and-dating/