newsics.com
ಖ್ಯಾತ ಬಹುಭಾಷಾ ನಟಿ, ಹಿರಿಯ ಕಲಾವಿದೆ ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರವನ್ನು ಅವರ ನಿವಾಸದಲ್ಲೇ ಇಡಲಾಗಿದ್ದು, ಸ್ಟಾರ್ ನಟ, ನಟಿಯರು ಸರೋಜಾದೇವಿ ಅವರ ಅಂತಿಮ ದರ್ಶನ ಪಡೆಯಲು ಬರುತ್ತಿದ್ದಾರೆ.
ನಾಳೆ ಬೆಳಗ್ಗೆ 11 :30 ಕ್ಕೆ ಅವರ ಹುಟ್ಟೂರಿನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ನಾಳೆ ಬೆಳಗ್ಗೆ 11 :30 ಕ್ಕೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ. ಒಕ್ಕಲಿಗ ಸಂಪ್ರದಾಯದಂತೆ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಮೂಲಗಳು ತಿಳಿಸಿದೆ .ನಾಳೆವರೆಗೆ ಮಲ್ಲೇಶ್ವರಂನ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲೂ ನಟಿಸಿದ್ದರು. 1938ರ ಜನವರಿ 7 ರಂದು ಬೆಂಗಳೂರಿನಲ್ಲಿ ಜನಿಸಿದ ಬಿ ಸರೋಜಾದೇವಿ ಅಂದಿನ ಕಾಲದಲ್ಲೇ ಮೊದಲ ಲೇಡಿ ಸೂಪರ್‌ಸ್ಟಾರ್ ಆಗಿದ್ದವರು. 1962ರಲ್ಲಿ ಪ್ರಸಾರವಾದ ‘ಕಿತ್ತೂರ ರಾಣಿ ಚೆನ್ನಮ್ಮ’ ಸಿನಿಮಾದಲ್ಲಿ ಬಿ ಸರೋಜಾದೇವಿ ಅವರು ನಟಿಸಿದ್ದರು.