newsics.com
ಉಡುಪಿ: ಇತ್ತೀಚೆಗೆ ಬ್ರಹ್ಮಾವರ ಸಮೀಪದ ಕುಂಜಾಲು ಎಂಬಲ್ಲಿ ದನದ ರುಂಡ ಪತ್ತೆಯಾಗಿದ್ದು ಸಾಕಷ್ಟು ಸುದ್ದಿಯಾಗಿತ್ತು.ಇದೀಗ ಕಾರ್ಕಳ ತಾಲೂಕಿನಲ್ಲೂ ಇಂತಹದ್ದೇ ಪ್ರಕರಣ ಪುನರಾವರ್ತನೆ ಯಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಲೆಬೆಟ್ಟು ಎಂಬಲ್ಲಿ ಹಸುವಿನ ದೇಹದ ಭಾಗಗಳು ಪತ್ತೆಯಾಗಿವೆ.
ಹಸು ದೇಹದ ಭಾಗಗಳು ಸ್ವರ್ಣಾ ನದಿಯಲ್ಲಿ ತೇಲಿ ಬಂದಿರುವ ಸಾಧ್ಯತೆ ಇದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಹಿಂದೂ ಪರ ಸಂಘಟನೆ ಕಾರ್ಯಕರ್ತರು ದೌಡಾಯಿಸಿದರು.
ಕಾರ್ಕಳ ಪೊಲೀಸರು ಸಹಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಳ, ಕಡಾರಿ, ಎಸ್.ಕೆ.ಬಾರ್ಡರ್ ಬಳಿ ಅಕ್ರಮ ಕಸಾಯಿಖಾನೆ ಇರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ