Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Sigandur Bridge inauguration today ಸಿಗಂದೂರು ಸೇತುವೆ ಲೋಕಾರ್ಪಣೆ ಇಂದು: ಕಾರ್ಯಕ್ರಮ ಮುಂದೂಡಿ ಎಂದ ಸಿಎಂ
ಕರ್ನಾಟಕದೇಶಪ್ರಮುಖ

Sigandur Bridge inauguration today ಸಿಗಂದೂರು ಸೇತುವೆ ಲೋಕಾರ್ಪಣೆ ಇಂದು: ಕಾರ್ಯಕ್ರಮ ಮುಂದೂಡಿ ಎಂದ ಸಿಎಂ

Share
2 Min Read
SHARE

newsics.com

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು-ಕಳಸವಳ್ಳಿ (ಸಿಗಂದೂರು) ಸೇತುವೆ ಲೋಕಾರ್ಪಣೆಗೆ ಕೆಲವೇ ಗಂಟೆ ಬಾಕಿ ಉಳಿದಿದ್ದು, ಕಾರ್ಯಕ್ರಮ ಮುಂದೂಡುವಂತೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಸೋಮವಾರ (ಜು.14) ನಡೆಯಲಿರುವ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಮುಂದೂಡುವಂತೆ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.

ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಿತವಾಗಿದೆ. ಆದರೆ, ಈ ಬಗ್ಗೆ ನನಗೆ ಮೊದಲೇ ಮಾಹಿತಿ ನೀಡಿಲ್ಲ. ಇದೇ ದಿನ ಕರ್ನಾಟಕ ಸರ್ಕಾರದಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನನ್ನ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಹೀಗಾಗಿ ನಾಳೆಯ (ಜು.14) ಕಾರ್ಯಕ್ರಮ ಮುಂದೂಡಿ, ಮತ್ತೊಂದು ದಿನ ಕಾರ್ಯಕ್ರಮ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜುಲೈ 11ರಂದೇ ಪತ್ರ ಬರೆದಿದ್ದಾರೆ.

ಸಿಎಂ ಪತ್ರದಲ್ಲೇನಿದೆ?

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದೊಂದಿಗೆ ಜುಲೈ 14, 2025 ರಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ನೆಹರು ಮೈದಾನದಲ್ಲಿ ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನನ್ನ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಮುದ್ರಿಸಲಾಗಿದೆ. ಆದರೆ, ಈ ಕಾರ್ಯಕ್ರಮದ ಬಗ್ಗೆ ನನಗೆ ಮುಂಚಿತವಾಗಿ ತಿಳಿಸಿಲ್ಲ. ಅದೇ ದಿನ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ನನ್ನ ಅಧ್ಯಕ್ಷತೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಈಗಾಗಲೇ ನಿಗದಿಪಡಿಸಲಾಗಿದೆ.

ರಾಜ್ಯ ಮಟ್ಟದ ಕಾರ್ಯಕ್ರಮಗಳನ್ನು ನಿಗದಿಪಡಿಸುವ ಮೊದಲು ಹೆದ್ದಾರಿ ಸಚಿವಾಲಯವು, ರಾಜ್ಯ ಸರ್ಕಾರದೊಂದಿಗೆ ಸಮಾಲೋಚಿಸಿದ್ದರೆ ಹೆಚ್ಚು ಸೂಕ್ತವಾಗುತ್ತಿತ್ತು. ಆದ್ದರಿಂದ, ಅಂತಹ ಕಾರ್ಯಕ್ರಮಗಳನ್ನು ಆಯೋಜಿಸುವಾಗ ರಾಜ್ಯ ಸರ್ಕಾರದೊಂದಿಗೆ ಸಮನ್ವಯ ಸಾಧಿಸಲು ಇಲಾಖೆಗೆ ಸೂಚಿಸಬೇಕೆಂದು ನಾನು ವಿನಂತಿಸುತ್ತೇನೆ. ಅಲ್ಲದೆ, ಈ ಕಾರ್ಯಕ್ರಮವನ್ನು ಮುಂದೂಡಲು ಮತ್ತು ನಿಮಗೆ ಅನುಕೂಲಕರವಾದ ಒಂದೆರಡು ದಿನಾಂಕಗಳನ್ನು ನನಗೆ ಒದಗಿಸುವಂತೆ ನಾನು ವಿನಂತಿಸುತ್ತೇನೆ. ಇದರಿಂದ ನಾನು ಈ ಮಹತ್ವದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ನಿಮ್ಮೊಂದಿಗೆ ಭಾಗಿಯಾಗಲು ಸಾಧ್ಯವಾಗುತ್ತದೆ ಎಂದು ಕೋರಿದ್ದಾರೆ.

ಸತೀಶ್ ಜಾರಕಿಹೊಳಿ ಭಾಗಿ
ಸರ್ಕಾರದ ಪರವಾಗಿ ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭಾಗಿಯಾಗಲಿದ್ದಾರೆ.

Central approves gold mining in KGF ಕೆಜಿಎಫ್‌ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ

Flight crash ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಹೊತ್ತಿ ಉರಿದ ವಿಮಾನ, ಹಲವರ ಸಾವು, ವಿಡಿಯೋ ನೋಡಿ

ಪ್ರತಿ ಸೆಕೆಂಡ್‌ಗೆ 10 ಲಕ್ಷ ರೂಪಾಯಿ ಚಾರ್ಜ್ ಮಾಡಿದ ನಯನತಾರಾ

TAGGED:Sigandur Bridge inauguration today: CM says program should be postponed
Share This Article
Facebook Twitter Copy Link Print
Previous Article Central approves gold mining in KGF ಕೆಜಿಎಫ್‌ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಸರ್ಕಾರ ಸಮ್ಮತಿ
Next Article Wife lived with husband’s corpse 4 ವರ್ಷದಿಂದ ಗಂಡನ ಶವದೊಂದಿಗೇ ನಿದ್ರಿಸಿದ ಮಹಿಳೆ! ಮಕ್ಕಳಿಗೆ ಬೆದರಿಕೆ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?