newsics.com
ನವದೆಹಲಿ: ಜು.16ರಂದು ಯೆಮೆನ್‌ನಲ್ಲಿ ಗಲ್ಲಿಗೇರಿಸಲು ನಿಗದಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಬಿಡುಗಡೆ ಮಾಡಿಸಲು ಅಥವಾ ಮರಣದಂಡನೆಯನ್ನು ತಡೆಯಲು ಹೆಚ್ಚಿನದ್ದನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಜಗತ್ತಿನ ಇತರ ರಾಷ್ಟ್ರಗಳಂತೆ ಯೆಮೆನ್ ಅಲ್ಲ. ಆ ರಾಷ್ಟ್ರದೊಂದಿಗೆ ರಾಜತಾಂತ್ರಿಕ ಮಾತುಕತೆ ಅಷ್ಟು ಸುಲಭವಲ್ಲ. ಹೀಗಾಗಿ ಇದಕ್ಕಿಂತ ಹೆಚ್ಚಿನದನ್ನು ಕೇಂದ್ರ ಸರ್ಕಾರ ಮಾಡಲು ಸಾಧ್ಯವಿಲ್ಲ’ ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠಕ್ಕೆ ತಿಳಿಸಿದರು.
ಮಾತುಕತೆ ಸೇರಿದಂತೆ ಗಲ್ಲು ಶಿಕ್ಷೆಯಿಂದ ನಿಮಿಷಾ ಅವರನ್ನು ಪಾರು ಮಾಡಲು ಇರುವ ಎಲ್ಲಾ ಮಾರ್ಗಗಳನ್ನು ಕಂಡುಕೊಳ್ಳಲು ಪ್ರಯತ್ನಿಸಲಾಯಿತು. ಆದರೆ, ಅದರಿಂದ ಯಾವುದೇ ಪ್ರಯೋಜನವಾಗಿಲ್ಲ. ಶಿಕ್ಷೆಯನ್ನು ಅಮಾನತಿನಲ್ಲಿಡುವಂತೆ ಮಾಡಿದ ಮನವಿಗೂ ಅಲ್ಲಿಂದ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ’ ಎಂದು ಹೇಳಿದರು.
ನಿಮಿಷಾ ಪ್ರಿಯಾ 2017 ರಲ್ಲಿ ತನ್ನ ಯೆಮೆನ್ ವ್ಯವಹಾರ ಪಾಲುದಾರ ತಲಾಲ್ ಅಬ್ದೋ ಮಹ್ದಿ ಅವರ ಕೊಲೆ ಆರೋಪದ ಮೇಲೆ ಮರಣದಂಡನೆಯನ್ನು ಎದುರಿಸುತ್ತಿದ್ದಾರೆ . ನಿಮಿಷಾ ಪ್ರಿಯಾಳನ್ನು ಮರಣದಂಡನೆಯಿಂದ ರಕ್ಷಿಸಲು ಕೊಲೆಯಾದ ವ್ಯಕ್ತಿಯ ಕುಟುಂಬಕ್ಕೆ ಹಣವನ್ನು ಪಾವತಿಸುವ ಮೂಲಕ ಮರಣದಂಡನೆಯನ್ನು ಮಾತುಕತೆ ಮೂಲಕ ಪರಿಹರಿಸಬಹುದು ಎಂದು ಹೇಳಲಾಗಿದೆ. ನ್ಯಾಯಮೂರ್ತಿ ಧುಲಿಯಾ ನೇತೃತ್ವದ ಪೀಠವು ಅರ್ಜಿಯ ಪ್ರತಿಯನ್ನು ಕೇಂದ್ರದ ಅತ್ಯುನ್ನತ ಕಾನೂನು ಅಧಿಕಾರಿಯಾದ ಭಾರತದ ಅಟಾರ್ನಿ ಜನರಲ್ ಅವರಿಗೆ ಸಲ್ಲಿಸುವಂತೆ ನಿರ್ದೇಶಿಸಿತು.
https://www.newsics.com/2025/07/14/renowned-model-san-rachel-dies/