newsics.com
ಕ್ಯಾಲಿಫೋರ್ನಿಯಾ: 18 ದಿನ ಕಳೆದ ನಂತರ ಭೂಮಿಗೆ ಬಂದಿರುವ ಶುಭಾಂಶು ಶುಕ್ಲಾ ಹಾಗೂ ಇತರ ಗಗನಯಾನಿಗಳು ಕೆಲವು ದಿನ ಸವಾಲಿನ ಸ್ಥಿತಿ ಎದುರಿಸಲಿದ್ದಾರೆ.
ನಿರ್ವಾತ ಪ್ರದೇಶ ವಾಸದಿಂದ ಗುರುತ್ವಾಕರ್ಷಣೆಯಿರುವ ಮಾತೃಗ್ರಹಕ್ಕೆ ಬಂದಿರುವ ಶುಭಾಂಶು, ಇಲ್ಲಿನ ವಾತಾವರಣಕ್ಕೆ ಒಗ್ಗಿಕೊಳ್ಳುವಲ್ಲಿ ಕೆಲವು ಸವಾಲು ಎದುರಿಸಬೇಕಾಗುತ್ತದೆ. ಹೀಗಾಗಿ ಎಲ್ಲ ಯಾತ್ರಿಕರಿಗೆ 1 ವಾರ ಪುನಶ್ವೇತನ ಶಿಬಿರ ಹಮ್ಮಿ ಕೊಳ್ಳಲಾಗಿದೆ. ನಂತರ ಅವರು ಶಿಬಿರದಿಂದ ಹೊರಬಂದು ಸಾರ್ವಜನಿಕರ ಜತೆ ಬೆರೆಯಲಿದ್ದಾರೆ.
ಗಗನಯಾನದಿಂದ ಬಂದ ನಂತರ ಯಾತ್ರಿಗಳು ತಲೆ ಸುತ್ತುವಿಕೆ, ವಾಕರಿಕೆ, ಅಸ್ಥಿರ ನಡಿಗೆ, ತೊದಲುವಿಕೆಯಂತಹ ಸಮಸ್ಯೆಗಳನ್ನು ಎದುರಿಸುವ ಅಪಾಯವಿರುತ್ತದೆ. ಗಗನಯಾನಿಗಳ ಸ್ನಾಯುಗಳಲ್ಲಿ ಜೀವಕೋಶಗಳ ನಷ್ಟವಾಗುತ್ತದೆ. ಅಂತೆಯೇ, ಬೆನ್ನು, ಸೊಂಟ, ತೊಡೆ ಎಲುಬುಗಳ ಶೇ.1ರಷ್ಟು ಸಾಂದ್ರತೆ ಕಳೆದುಕೊಳ್ಳುತ್ತಾರೆ.
ಗುರುತ್ವಾಕರ್ಷಣೆ ಕೊರತೆಯಿಂದ ದೇಹದ ದ್ರವಗಳು ಗಗನಯಾತ್ರಿಗಳ ತಲೆ ಭಾಗದಲ್ಲಿ ಶೇಖರಣೆಯಾಗಿ ಅದು ಊದಿ ಕೊಂಡಿರುವ ಸಾಧ್ಯತೆ ಇರುತ್ತದೆ. ದೇಹದ ಕೆಳಭಾಗದಲ್ಲಿ ದ್ರವಗಳ ಕೊರತೆಯಿಂದಾಗಿ ಕಾಲುಗಳು ಕೃಶ ಮತ್ತು ಬಲಹೀನವಾಗಿರುತ್ತವೆ. ಜೊತೆಗೆ, ಪಾದದ ಚರ್ಮದ ಪದರ ಕಿತ್ತುಹೋಗಿ, ಅದು ತೆಳ್ಳಗೆ ಹಾಗೂ ಮೃದು ವಾಗುತ್ತದೆ. ಪರಿಣಾಮವಾಗಿ ಭೂಮಿಗೆ ಮರಳುತ್ತಿದ್ದಂತೆ ಗಗನಯಾತ್ರಿಗಳು ನಡೆಯಲು ಕಷ್ಟಪಡುವಂತಾಗುತ್ತದೆ. ಈ ಪುನಶ್ಚೇತನ ಶಿಬಿರ ಅವರಿಗೆ ಆರೈಕೆ ನೀಡಲಿದೆ.
ಇನ್ಮುಂದೆ ಎಲ್ಲಾ ಮಲ್ಟಿಪ್ಲೆಕ್ಸ್-ಚಿತ್ರಮಂದಿರದಲ್ಲಿ ಎಲ್ಲಾ ಭಾಷೆ ಸಿನಿಮಾಗಳಿಗೆ ಏಕರೂಪದ ದರ ಜಾರಿ: ಸರ್ಕಾರ ಆದೇಶ