newsics.com
ಮಧ್ಯಪ್ರದೇಶ; ವ್ಯಕ್ತಿಯೊಬ್ಬರು ಸಾಮಾಜಿಕ ಸೇವೆಯ ಪೋಸ್ ನೀಡುವುದಕ್ಕೆ ಹೋಗಿ ಕಟ್ಟಡ ನಿರ್ಮಾಣದ ಹೊಂಡಕ್ಕೆ ಬಿದ್ದಿರುವ ಘಟನೆ ಮಧ್ಯಪ್ರದೇಶದ ಸಿಯೋನಿಯಲ್ಲಿ ನಡೆದಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದೆ.
ಸಾಮಾಜಿಕ ಕಾರ್ಯಕರ್ತರೊಬ್ಬರು ಶ್ರಮದಾನದ ವೇಳೆ 6 ಅಡಿಯ ಹೊಂಡಕ್ಕೆ ಬಿದ್ದಿದ್ದಾರೆ. ವೀಡಿಯೋದಲ್ಲಿ ಬಿಳಿ ಬಣ್ಣದ ಕುರ್ತಾ ಹಾಗೂ ಪ್ಯಾಂಟ್ ಧರಿಸಿರುವ ವ್ಯಕ್ತಿಯೊಬ್ಬರು ಹೊಂಡದ ಪಕ್ಕದಲ್ಲಿ ನಿಂತಿದ್ದು ಕೆಲಸಗಾರರೊಬ್ಬರು ಅವರ ಕೈಗೆ ಕಾಂಕ್ರೀಟ್ ಮಿಕ್ಸ್‌ನ್ನು ಅವರ ಕೈಗೆ ನೀಡಿದ್ದಾರೆ. ಈ ವೇಳೆ ಹೊಂಡಕ್ಕೆ ಅಂದರೆ ಕಟ್ಟಡದ ಫೌಂಡೇಶನ್‌ಗೆ ಈ ಕಾಂಕ್ರೀಟ್ ಮಿಶ್ರಣವನ್ನು ಹಾಕುವಷ್ಟರಲ್ಲಿ ಅವರು ನಿಂತಿದ್ದ ಜಾಗದಲ್ಲಿ ನೆಲ ಕುಸಿದಿದ್ದು ಅವರು ಕೂಡ ಒಟ್ಟಿಗೆ ಆರು ಆಡಿ ಆಳದ ಹೊಂಡಕ್ಕೆ ಬಿದ್ದಿದ್ದಾರೆ.
ವೈರಲ್ ಆದ ವೀಡಿಯೋದಲ್ಲಿ ಕಾಣುವಂತೆ ಮೊದಲಿಗೆ ಅವರಿಗೆ ಮಹಿಳಾ ಕಾರ್ಮಿಕರೊಬ್ಬರು ಕಾಂಕ್ರೀಟ್ ಮಿಶ್ರಣವನ್ನು ಕಟ್ಟಡದ ಅಡಿಪಾಯಕ್ಕೆ ಹಾಕಲು ತಂದು ಕೊಟ್ಟಿದ್ದಾರೆ. ಆದರೆ ಅದನ್ನು ಫೌಂಡೇಶನ್ ಹೊಂಡಕ್ಕೆ ಸುರಿದ ಅವರು ಫೋಟೋ ಸರಿ ಬರಲಿಲ್ಲ, ಇನ್ನೊಂದು ಬಾರಿ ತಂದುಕೊಡಿ ಎಂದಿದ್ದಾರೆ. ಈ ವೇಳೆ ಇನ್ನೊಬ್ಬ ಕಾರ್ಮಿಕ ಇನ್ನೊಂದು ಸರ ಕಾಂಕ್ರೀಟ್ ಮಿಶ್ರಣವನ್ನು ಅವರ ಕೈಗೆ ತಂದಿಟ್ಟಿದ್ದಾನೆ. ಇನ್ನೇನು ಅವರು ಅದನ್ನು ಕೆಳಗೆ ಸುರಿಯಬೇಕು ಅನ್ನುಷ್ಟರಲ್ಲಿ ಅವರ ಕಾಲಿನ ಕೆಳಭಾಗದ ಮಣ್ಣು ಕುಸಿದು ಅವರು ಸಹಿತ ಹೊಂಡಕ್ಕೆ ಬಿದ್ದಿದೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದ್ದು, ತೀವ್ರ ನಗೆಪಾಟಲೀಗೆ ಕಾರಣವಾಗುತ್ತಿದೆ.
https://www.instagram.com/reel/DMI-Nh-Th52/?igsh=MTNsOHY2ZzVjNW5ibw==
ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಕೇಸ್ : ಶಾಸಕ ಬೈರತಿ ಬಸವರಾಜ್ ಸೇರಿ ಐವರ ವಿರುದ್ಧ FIR ದಾಖಲು