newsics.com
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ನಾಳೆ ದರ್ಶನ್ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಜಾಮೀನು ನೀಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ದರ್ಶನ್ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಮಾಡುವಂತೆ ಸರ್ಕಾರ ಕೋರಿದೆ. 2024ರ ಡಿಸೆಂಬರ್ ನಲ್ಲಿ ಹೈಕೋರ್ಟ್ ಆರೋಪಿಗಳಿಗೆ ಜಾಮೀನು ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.
ಪ್ರಕರಣದ ಹಿನ್ನೆಲೆಯಲ್ಲಿ, ಚಿತ್ರದುರ್ಗದ 33 ವರ್ಷದ ರೇಣುಕಾಸ್ವಾಮಿ ಎಂಬಾತನನ್ನು ಜೂನ್ 8, 2024ರಂದು ಕೊಲೆ ಮಾಡಲಾಗಿತ್ತು. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂಬ ಕಾರಣಕ್ಕೆ ದರ್ಶನ್ ಸಹಚರರು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ, ಬೆಂಗಳೂರಿನ ಶೆಡ್‌ವೊಂದರಲ್ಲಿ ಮೂರು ದಿನಗಳ ಕಾಲ ಚಿತ್ರಹಿಂಸೆ ನೀಡಿ ಕೊಲೆಗೈದಿದ್ದ ಆರೋಪವಿದೆ. ಜೂನ್ 9ರಂದು ರೇಣುಕಾಸ್ವಾಮಿಯ ಮೃತದೇಹ ಬೆಂಗಳೂರಿನ ಸುಮನಹಳ್ಳಿ ಬಳಿಯ ಒಳಚರಂಡಿಯಲ್ಲಿ ಪತ್ತೆಯಾಗಿತ್ತು.