newsics.com
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಬೆಂಗಳೂರಿನ ಹಲಸೂರು ಕೆರೆ ಬಳಿ ನಡೆದಿದೆ.
ರೌಡಿಶೀಟರ್ ಬಿಕ್ಲು ಶಿವ ಗುರುತೇ ಸಿಗದ ಹಾಗೇ ತಮ್ಮ ಮನೆಯ ಮುಂದೆಯೇ ಬರ್ಬರವಾಗಿ ಹತ್ಯೆಯಾಗಿದ್ದಾನೆ. ಮನೆ ಹೊರಗಡೆ ನಿಂತಿದ್ದಾಗ ಏಕಾಏಕಿ ಕಾರಿನಲ್ಲಿ ಬಂದ ನಾಲ್ಕೈದು ದುಷ್ಕರ್ಮಿಗಳ ಗ್ಯಾಂಗ್, ರಕ್ತಬೀಜಾಸುರರಂತೆ ಬಿಕ್ಲು ಶಿವನನ್ನ ಕಾರಿನ ಮಧ್ಯೆ ಅಡ್ಡಗಟ್ಟಿ ಯಾರೂ ಊಹಿಸಿದ ರೀತಿಯಲ್ಲಿ ಕೊಚ್ಚಿ ಕೊಚ್ಚಿ ಕೊಲೆ ಮಾಡಿದ್ದಾರೆ.
ಸ್ಥಳಕ್ಕೆ ಡಿಸಿಪಿ ಡಿ. ದೇವರಾಜ್, ಜಂಟಿ ಪೋಲಿಸ್ ಆಯುಕ್ತ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಯಾದ ರೌಡಿಶೀಟರ್ ಬಿಕ್ಲು ಶಿವ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.