newsics.com
ತುಮಕೂರು: ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಬಸ್ಸುಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ವಿಪರೀತವಾಗಿದೆ ಆದರೆ ಈ ಯೋಜನೆಯಿಂದ ಹಲವು ಫಜೀತಿ ಸೃಷ್ಟಿ ಮಾಡುತ್ತಿದೆ. ಇದೀಗ ಮೈಸೂರಿನಿಂದ ತುಮಕೂರಿಗೆ ಸಂಚರಿಸುತ್ತಿದ್ದ ಬಸ್‌ನಲ್ಲಿ ಮಹಿಳೆಯೊಬ್ಬರು ಉಸಿರುಗಟ್ಟಿ ಕಿರುಚಾಡಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.
ಈ ಬಸ್ ಮೈಸೂರು ತುಮಕೂರು ಮಾರ್ಗದಲ್ಲಿ ಸಂಚರಿಸುತ್ತಿತ್ತು. ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿದ್ದ ಮಹಿಳಾ ತಂಡ ಈ ಬಸ್ಸಿನಲ್ಲಿ ಹೋಗುತ್ತಿದ್ದ ವೇಳೆ ಘಟನೆ ನಡೆದಿದೆ.
ಅತಿಯಾದ ಜನಸಂದಣಿಯಲ್ಲಿ ಬಸ್‌ನೊಳಗೆ ಉಂಟಾದ ತೀವ್ರ ನೂಕಾಟ-ತಳ್ಳಾಟದಿಂದ ಮಹಿಳೆಯೊಬ್ಬರಿಗೆ ಉಸಿರಾಡಲು ತೀವ್ರ ತೊಂದರೆ ಉಂಟಾಗಿದೆ. ನನ್ನನ್ನು ಕಾಪಾಡಿ, ಬಸ್ಸಿನಿಂದ ಕೆಳಗಿಳಿಸಿ ಎಂದು ಜೋರಾಗಿ ಮಹಿಳಾ ಪ್ರಯಾಣಿಕರೊಬ್ಬರು ಕೂಗಿಕೊಂಡಿದ್ದಾರೆ. ತಕ್ಷಣವೇ ಬಸ್ಸು ನಿಲ್ಲಿಸಿದ ನಿರ್ವಾಹಕರು ಮಹಿಳೆಯನ್ನು ಕೆಳಗಿಳಿಸಿದ್ದಾರೆ.