newsics.com
ಕಾರು ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಮಗು ಸೇರಿ 7 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ನಲ್ಲಿ ನಡೆದಿದೆ.
ವಾನಿ-ದಿಂಡೋರಿ ರಸ್ತೆಯ ನರ್ಸರಿ ಬಳಿ ನಡೆದಿರುವ ಘಟನೆಯ ಬಗ್ಗೆ ಪೊಲೀಸರಿಗೆ ರಾತ್ರಿ 11.57 ಕ್ಕೆ ಮಾಹಿತಿ ಬಂದಿತ್ತು.ಪೊಲೀಸರು ಸ್ಥಳಕ್ಕೆ ತಲುಪಿದಾಗ, ಎರಡೂ ವಾಹನಗಳು ರಸ್ತೆಬದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಕಂಡುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ್ದಾರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮಾಹಿತಿ ಬಂದ ತಕ್ಷಣ, ಪೊಲೀಸರು ಮತ್ತು ಇತರ ಸಂಸ್ಥೆಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದರು.