newsics.com
ಬೆಂಗಳೂರು: ಕೋಲಾರದಲ್ಲಿ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ಮನೆ ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಇಡಿಯಿಂದ 1.32 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.
2023ರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಸಹಕಾರ ಹಾಲು ಉತ್ಪಾದಕರ ಒಕ್ಕೂಟ ಲಿಮಿಟೆಡ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಹಣದ ಅಕ್ರಮ ಹರಿವಿನ (ಪ್ರಕರಣಕ್ಕೆ ಸಂಬಂಧಪಟ್ಟಿದ್ದು, ಜುಲೈ 16, 2025ರಂದು ಅಧಿಕೃತವಾಗಿ ಈ ಮೌಲ್ಯದ ಆಸ್ತಿಯನ್ನು ಜಪ್ತಿಗೊಳಿಸಲಾಗಿದೆ. ED ಅಧಿಕೃತ ಟ್ವೀಟ್‌ನಲ್ಲಿ, ‘ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಮತ್ತು ಇತರರಿಗೆ ಸೇರಿದ ₹1.32 ಕೋಟಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳನ್ನು ಮುಟ್ಟುಗೋಲು ಹಾಕಲಾಗಿದೆ’ ಎಂದು ಮಾಹಿತಿ ನೀಡಲಾಗಿದೆ.
2023ರಲ್ಲಿ ನಡೆದ KOMUL ನೇಮಕಾತಿ ಪ್ರಕ್ರಿಯೆಯಲ್ಲಿ ಹಲವು ಅವ್ಯವಹಾರ ನಡೆದಿರುವ ಶಂಕೆ ಇದೆ. ಈ ಹಗರಣದಲ್ಲಿ ಲಕ್ಷಾಂತರ ರೂಪಾಯಿ ಹಸ್ತಾಂತರವಾಗಿದ್ದು, ಅರ್ಹತೆಯಿಲ್ಲದವರ ನೇಮಕಾತಿಗೆ ಹಣ ಪಡೆದುಕೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ.