newsics.com
ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಂಕಜ್ ಮಿಥಲ್ ಹಾಗೂ ನ್ಯಾಯಾಮೂರ್ತಿ.ಪ್ರಸನ್ನ ಬಿ. ವರಾಳೆ ಅವರ ದ್ವಿಸದಸ್ಯ ಪೀಠ, ಮುಂದಿನ ಆದೇಶದವರೆಗೂ ಕುಮಾರಸ್ವಾಮಿ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶ ಹೊರಡಿಸಿದೆ.
ಪ್ರಕರಣವೇನು?
ರಾಮನಗರ ಜಿಲ್ಲೆಯಲ್ಲಿಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಗಳು ಸರಕಾರಿ ಭೂಮಿ ಒತ್ತುವರಿ ಮಾಡಿದ್ದಾರೆಂದು ಆಕ್ಷೇಪಿಸಿ ಸಮಾಜ ಪರಿವರ್ತನಾ ಸಮುದಾಯ ಸಲ್ಲಿಸಿದ್ದ ಅರ್ಜಿಯ ಸಂಬಂಧ ಕರ್ನಾಟಕ ಲೋಕಾಯುಕ್ತ ವರದಿ ಅನುಸಾರ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ 2020ರಲ್ಲಿಆದೇಶಿಸಿತ್ತು. ಆ ಆದೇಶವನ್ನು ಜಾರಿಗೊಳಿಸಿಲ್ಲವೆಂದು ಸಮಾಜ ಪರಿವರ್ತನಾ ಸಮುದಾಯವು ರಾಜ್ಯ ಸರಕಾರದ ವಿರುದ್ಧ ನ್ಯಾಯಾಂಗ ನಿಂದನೆಯ ಅರ್ಜಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಸರಕಾರಿ ಭೂಮಿ ಒತ್ತುವರಿ ಪತ್ತೆ ಮಾಡಲು ರಾಜ್ಯ ಸರಕಾರ 2025ರ ಜ.28ರಂದು ಎಸ್ಐಟಿ ರಚಿಸಿ ಆದೇಶಿಸಿತ್ತು. ಇದು ಕಾನೂನಿಗೆ ಅನುಗುಣವಾಗಿಲ್ಲ. ಆದ್ದರಿಂದ ಅದನ್ನು ರದ್ದುಗೊಳಿಸಬೇಕೆಂದು ಕುಮಾರಸ್ವಾಮಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
https://www.newsics.com/2025/07/17/fire-in-hypermarket-50-dead/