newsics.com
ಸ್ಟಾರ್ ಆಲ್ ರೌಂಡರ್ ಆಂಡ್ರೆ ರಸೆಲ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಜುಲೈ 21 ರಂದು ಜಮೈಕಾದ ಸಬೀನಾ ಪಾರ್ಕ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಎರಡನೇ T20I ಪಂದ್ಯ ಅವರ ಕೊನೆಯ ಪಂದ್ಯವಾಗಲಿದೆ.2012 ಮತ್ತು 2016 ರ ಟಿ20 ವಿಶ್ವಕಪ್ ವಿಜೇತ ತಂಡದ ಸದಸ್ಯರಾಗಿದ್ದರು.
ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳ ನಂತರ ನಿವೃತ್ತಿ ಹೊಂದುವುದಾಗಿ 37 ವರ್ಷದ ರಸೆಲ್ ಘೋಷಿಸಿದ್ದಾರೆ. ಐದು ಪಂದ್ಯಗಳ ಸರಣಿಯ ಮೊದಲ ಎರಡು ಪಂದ್ಯಗಳಿಗೆ ರಸೆಲ್ ಅವರನ್ನು ಆಯ್ಕೆದಾರರು ತಂಡದಲ್ಲಿ ಸ್ಥಾನ ಕಲ್ಪಿಸಿದ್ದಾರೆ.
ರಸೆಲ್ ಅವರ ತವರು ಮೈದಾನವಾದ ಜಮೈಕಾದ ಸಬೀನಾ ಪಾರ್ಕ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಮೊದಲ ಎರಡು ಪಂದ್ಯಗಳು ನಡೆಯಲಿವೆ. ಮುಂಬರುವ 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಆ್ಯಂಡ್ರೆ ರಸೆಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಘೋಷಿಸಿರುವುದು ಕೆರಿಬಿಯನ್ ಪಡೆಗೆ ಹಿನ್ನಡೆಯಾಗಿ ಪರಿಣಮಿಸುವ ಸಾಧ್ಯತೆಯಿದೆ.
https://www.newsics.com/2025/07/17/ed-raids-congress-mla-ky-nanjegowdas-house/