newsics.com
ಬೆಂಗಳೂರು: ರಾಜಧಾನಿ ಬೆಂಗಳೂರು, ಕರಾವಳಿ, ಮಲೆನಾಡು ಸೇರಿ 14 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್‌ನ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಮಾರುತಗಳು ಮತ್ತೆ ಸಕ್ರಿಯವಾಗಿದ್ದು ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ.
ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಜು.19ರಿಂದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ. ಅದೇ ರೀತಿ ಮಲೆನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಮುನ್ಸೂಚನೆ ನೀಡಲಾಗಿದೆ.
ಸಿನಿಮಾ ಬಿಡುಗಡೆ ತಯಾರಿ ನಡುವೆ ನಟ ವಿಜಯ್ ದೇವರಕೊಂಡ ಆಸ್ಪತ್ರೆಗೆ ದಾಖಲು; ಸದ್ಯದ ಆರೋಗ್ಯ ಸ್ಥಿತಿ ಹೇಗಿದೆ?