Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾರ್ ನಲ್ಲಿ ಗಲಾಟೆ, ಯುವತಿ, ಆಕೆಯ ಬಾಯ್ ಫ್ರೆಂಡ್ ಥಳಿಸಿದ ಬೌನ್ಸರ್ ಗಳು!
ಕರ್ನಾಟಕಪ್ರಮುಖ

ಬಾರ್ ನಲ್ಲಿ ಗಲಾಟೆ, ಯುವತಿ, ಆಕೆಯ ಬಾಯ್ ಫ್ರೆಂಡ್ ಥಳಿಸಿದ ಬೌನ್ಸರ್ ಗಳು!

Share
1 Min Read
SHARE

newsics.com

ಬೆಂಗಳೂರು: ಯುವತಿ ಹಾಗೂ ಆಕೆಯ ಬಾಯ್ ಫ್ರೆಂಡ್ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಬ್ರಿಗೇಡ್ ರಸ್ತೆಯ ಬಾರ್ ವೊಂದರಲ್ಲಿ ನಡೆದಿದೆ.

ಈ ಸಂಬಂಧ ಬೌನ್ಸರ್ ಗಳಾದ ತ್ರಿಪುರಾದ ಹೃದಯ್ ದೇಬ್ ನಾಥ್ ಮತ್ತು ನೇಪಾಳದ ದೀಪೆನ್ ಖತ್ರಿ ಎಂಬವರನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧಿಸಿದ್ದು, ತದನಂತರ ಸ್ಟೇಷನ್ ಬೇಲ್ ನಲ್ಲಿ ಬಿಡುಗಡೆ ಮಾಡಿದ್ದಾರೆ.

ಯುವತಿ ನೀಡಿರುವ ದೂರಿನ ಪ್ರಕಾರ, ಮಧ್ಯಾಹ್ನ ಊಟಕ್ಕಾಗಿ ತನ್ನ ತಂಗಿ ಹಾಗೂ ಆಕೆಯ ಬಾಯ್ ಫ್ರೆಂಡ್ ಮತ್ತು ಮತ್ತೋರ್ವ ಫ್ರೆಂಡ್ ಜೊತೆಗೆ ಬಾರ್ ಅಂಡ್ ರೆಸ್ಟೋರೆಂಟ್ ಗೆ ಹೋಗಿದ್ದಾಗ ಮೊದಲ ಪ್ಲೋರ್ ನಲ್ಲಿ ಊಟ ಮಾಡಿ ಬಿಲ್ ಪಾವತಿಸಿ, ಗ್ರೌಂಡ್ ಪ್ಲೋರ್ ಗೆ ಬಂದಾಗ ಗಲಾಟೆ ನಡೆಯಿತು ಎಂದು ತಿಳಿಸಿದ್ದಾರೆ.

ಗಲಾಟೆ ಕುರಿತು ಪ್ರತಿಕ್ರಿಯಿಸಿದ ಯುವತಿಯ ಬಾಯ್ ಫ್ರೆಂಡ್, ನಾವು ಮಾತನಾಡುವಾಗ ಬೌನ್ಸರ್ ಓರ್ವ ನನ್ನ ಗರ್ಲ್ ಫ್ರೆಂಡ್ ಜೊತೆಗೆ ಅನುಚಿತವಾಗಿ ಮಾತನಾಡುತ್ತಿರುವುದು ಕಂಡುಬಂದಿತು. ನಂತರ ಅದನ್ನು ಪ್ರಶ್ನಿಸಿದಾಗ ಇದಕ್ಕಿದ್ದಂತೆ ನಮ್ಮ ಮುಖಕ್ಕೆ ಬೌನ್ಸರ್ ಗಳು ಗುದ್ದಿದ್ದಾರೆ. ನನ್ನ ಫ್ರೆಂಡ್ ಬಂದಾಗ ಅವರ ಮೇಲೂ ಹಲ್ಲೆ ನಡೆಯಿತು. ಬೌನ್ಸರ್ ತಡೆಯಲು ಬಂದ ಯುವತಿಯನ್ನು ತಳ್ಳಿದ್ದರಿಂದ ಅವರಿಗೂ ಗಾಯವಾಗಿದೆ. ನಂತರ ಬಾರ್ ನಿಂದ ನಿರ್ಗಮಿಸಿದ ಮೇಲೂ ಹಿಂಬಾಲಿಸಿದ ಬೌನ್ಸರ್ ಗಳು ಎರಡನೇ ಬಾರಿ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ಸಂಬಂಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 78, 115 ಮತ್ತು 126 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ಸ್ಟೇಷನ್ ಬೇಲ್ ಮೇಲೆ ಕಳುಹಿಸಲಾಗಿದೆ. ಮುಂದಿನ ತನಿಖೆ ನಡೆಯುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳು ಅಪರಾಧ ನಿರ್ಣಯಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Government School ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!

TAGGED:Bengaluru: Riot at baryoung woman and her boyfriend beaten up by bouncers!
Share This Article
Facebook Twitter Copy Link Print
Previous Article Government School ತಾನು ಕಲಿತ ಸರ್ಕಾರಿ ಶಾಲೆಯ ನವೀಕರಣಕ್ಕೆ 14 ಕೋಟಿ ದಾನ ಮಾಡಿದ ಬೆಂಗಳೂರಿನ ವೈದ್ಯ!
Next Article Digital arrest ಭಾರತದ ಮೊದಲ ಡಿಜಿಟಲ್ ಬಂಧನ ಶಿಕ್ಷೆ: 9 ಮಂದಿಗೆ ಜೀವಾವಧಿ ಶಿಕ್ಷೆ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?