Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅತ್ಯಾಚಾರ ಕೇಸ್: ಜು.30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ
ಕರ್ನಾಟಕಪ್ರಮುಖ

ಅತ್ಯಾಚಾರ ಕೇಸ್: ಜು.30ಕ್ಕೆ ಪ್ರಜ್ವಲ್ ರೇವಣ್ಣ ಭವಿಷ್ಯ ನಿರ್ಧಾರ

Share
1 Min Read
SHARE

newsics.com

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ನಾಲ್ಕು ಪ್ರಕರಣಗಳ ಪೈಕಿ ಒಂದಾದ ಕೆ.ಆರ್‌.ನಗರದ ಮಹಿಳೆ ಮೇಲೆ ಅತ್ಯಾ*ಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣ ಕುರಿತ ಅಂತಿಮ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜು.30ರಂದು ಪ್ರಕಟಿಸಲಿದೆ.
ಪ್ರಕರಣ ಸಂಬಂಧ ಪ್ರಜ್ವಲ್‌ ರೇವಣ್ಣ ಮತ್ತು ಸಿಐಡಿ, ಎಸ್‌ಐಟಿ ಪೊಲೀಸರ ಪರ ಸರ್ಕಾರಿ ಅಭಿಯೋಜಕರ ವಾದ-ಪ್ರತಿವಾದ ಆಲಿಸಿ ಶುಕ್ರವಾರ ವಿಚಾರಣೆ ಪೂರ್ಣಗೊಳಿಸಿರುವ ನಗರದ ಜನಪ್ರತಿನಿಧಿಗಳ ವಿಶೇಷ (82ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಕೋರ್ಟ್‌) ಕೋರ್ಟ್‌ ನ್ಯಾಯಾಧೀಶ ಸಂತೋಷ್‌ ಗಜಾನನ ಭಟ್ ಅವರು ಜು.30ಕ್ಕೆ ತೀರ್ಪು ಕಾಯ್ದಿರಿಸಿದ್ದಾರೆ.
ಇದರಿಂದ ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ ಆರೋಪ ಮುಕ್ತರಾಗುತ್ತಾರೆಯೇ ಅಥವಾ ದೋಷಿಯಾಗಿ ದೃಢಪಟ್ಟು ಶಿಕ್ಷೆಗೆ ಒಳಗಾಗುತ್ತಾರೆಯೇ ಎಂಬುದು ಜು.30ರಂದು ತಿಳಿಯಲಿದೆ. ಪ್ರಜ್ವಲ್‌ ರೇವಣ್ಣ ಅವರು ಒಂದೊಮ್ಮೆ ತಪ್ಪಿತಸ್ಥರು ಎಂದು ದೃಢಪಟ್ಟರೆ ಜೈಲು ಶಿಕ್ಷೆಗೆ ಒಳಗಾಗುವುದು ಗ್ಯಾರಂಟಿ. ಇದಕ್ಕೂ ಮುನ್ನ ವಿಚಾರಣೆಗೆ ಪೊಲೀಸರು ಬಾಡಿ ವಾರೆಂಟ್‌ ಮೇಲೆ ಪ್ರಜ್ವಲ್‌ ರೇವಣ್ಣ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಸಿಐಡಿಯ ಎಸ್‌ಐಟಿ ಪರ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್‌.ಜಗದೀಶ್‌ ಅವರು ತಮ್ಮ ವಾದ ಮತ್ತು ಅದನ್ನು ಬೆಂಬಲಿಸುವ ಕೆಲ ತೀರ್ಪಿಗೆ ಸಂಬಂಧಿಸಿದ ಲಿಖಿತ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು. ಇದೇ ವೇಳೆ ಪ್ರಜ್ವಲ್‌ ರೇವಣ್ಣ ಪರ ವಕೀಲ ಜಿ.ಅರುಣ್‌ ಸಹ ತಮ್ಮ ವಾದ ಹಾಗೂ ಇನ್ನಿತರ ದಾಖಲೆಗಳನ್ನು ಸಲ್ಲಿಸಿದರು.
ಅವುಗಳನ್ನು ದಾಖಲಿಸಿಕೊಂಡ ನ್ಯಾಯಾಲಯವು ವಿಚಾರಣೆ ಪೂರ್ಣಗೊಂಡಿದ್ದು, ಜು.30ರಂದು ಅಂತಿಮ ತೀರ್ಪು ಪ್ರಕಟಿಸುವುದಾಗಿ ತಿಳಿಸಿತು. ಅಲ್ಲದೆ, ಹೊಸದಾಗಿ ಬಾಡಿ ವಾರೆಂಟ್‌ ಜಾರಿಗೊಳಿಸಿ ಪ್ರಜ್ವಲ್‌ ರೇವಣ್ಣ ಅವರನ್ನು ಜು.30ರಂದು ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳಿಗೆ ಸೂಚಿಸಿತು.

ಒಂದು ವೇಳೆ ಕೋರ್ಟ್, ಪ್ರಜ್ವಲ್ ರೇವಣ್ಣನನ್ನು ದೋಷಿ ಎಂದು ತೀರ್ಪು ನೀಡಿದರೆ ಕನಿಷ್ಠ 10 ವರ್ಷ, ಗರಿಷ್ಠ ಜೀವಾವಧಿ ಶಿಕ್ಷೆಗೆ ಒಳಗಾಗಲಿದ್ದಾರೆ.

Digital arrest ಭಾರತದ ಮೊದಲ ಡಿಜಿಟಲ್ ಬಂಧನ ಶಿಕ್ಷೆ: 9 ಮಂದಿಗೆ ಜೀವಾವಧಿ ಶಿಕ್ಷೆ

TAGGED:Rape case: Prajwal Revanna's fate to be decided on July 30
Share This Article
Facebook Twitter Copy Link Print
Previous Article Digital arrest ಭಾರತದ ಮೊದಲ ಡಿಜಿಟಲ್ ಬಂಧನ ಶಿಕ್ಷೆ: 9 ಮಂದಿಗೆ ಜೀವಾವಧಿ ಶಿಕ್ಷೆ
Next Article ಬೀದರ್ ಗುರುದ್ವಾರದಲ್ಲಿ ಬಾಂಬ್ ಸ್ಫೋಟ ಬೆದರಿಕೆ: ಆತಂಕ ಸೃಷ್ಟಿಸಿದ ಮೇಲ್

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?