Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಬಿನಿ ಜಲಾಶಯದ ಪುನಶ್ಚೇತನಕ್ಕೆ ಕ್ರಮ; ಸಿಎಂ ಸಿದ್ದರಾಮಯ್ಯ
ಕರ್ನಾಟಕ

ಕಬಿನಿ ಜಲಾಶಯದ ಪುನಶ್ಚೇತನಕ್ಕೆ ಕ್ರಮ; ಸಿಎಂ ಸಿದ್ದರಾಮಯ್ಯ

Share
2 Min Read
SHARE

newsics.com

ಮೈಸೂರು ; ಕಬಿನಿ ಜಲಾಶಯದ ಪುನಶ್ಚೇತನಗೊಳಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭಾನುವಾರ ಹೆಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನಲೆಯಲ್ಲಿ ಬಾಗೀನ ಅರ್ಪಿಸಿದ ಬಳಿಕ , ಅಣೆಕಟ್ಟೆಯ ಕಾವಲು ಗೋಪುರದ ಬಳಿ ೩೨.೨೫ ಕೋಟಿ ವೆಚ್ಚದ ಅಣೆಕಟ್ಟೆ ಪುನಶ್ವೇತನ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಕಾವೇರಿ, ಕಬಿನಿ ಮಾತೆಗೆ ಪ್ರಜೆ ಸಲ್ಲಿಸಿ ಬಾಗೀನ ಅರ್ಪಿಸಿದ್ದೇವೆ. ಪ್ರತಿ ವರ್ಷದಂತೆ ಜಲಾಶಯ ತುಂಬಿದಾಗ ಬಾಗಿನ ಅರ್ಪಿಸಲಾಗಿದ್ದು, ರೈತರಿಗೆ ಒಳ್ಳೆಯದಾಗಲೆಂದು ಕಪಿಲಾ ಮಾತೆಗೆ ಪ್ರಾರ್ಥಿಸಲಾಗಿದೆ. ‘ಕಪಿಲಾ ನದಿಯು ಕೇರಳದಲ್ಲಿ ಹುಟ್ಟಿ, ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿ ಕಾವೇರಿ ನದಿಯನ್ನು ಸೇರುತ್ತದೆ. ಇದು ಕಾವೇರಿಯ ಪ್ರಮುಖ ಉಪನದಿಯಾಗಿದ್ದು, ೧.೧೩ ಲಕ್ಷ ಹೆಕ್ಟೇರ್ ಭೂಮಿಗೆ ನೀರಾವರಿ ಒದಗಿಸುತ್ತದೆ. ಈಗ ೧.೦೮ ಲಕ್ಷ ಎಕರೆಗೆ ನೀರಾವರಿ ಸೌಲಭ್ಯ ಸಿಗುತ್ತಿದೆ. ಇನ್ನೂ ೫ ಸಾವಿರ ಎಕರೆಗೆ ನೀರಾವರಿ ಸೌಲಭ್ಯ ಸಿಗಬೇಕಾಗಿದೆ. ಇದನ್ನು ಬಳಸಿಕೊಳ್ಳುವ ಕೆಲಸವನ್ನು ಮಾಡಲಿದ್ದೇವೆ ಎಂದು ತಿಳಿಸಿದರು.

ಕಬಿನಿ ಜಲಾಶಯ ನಿರ್ಮಾಣ ೧೯೫೦ರಲ್ಲಿ ಆರಂಭವಾಗಿ ೧೯೭೪ರಲ್ಲಿ ಪೂರ್ಣಗೊಂಡಿದೆ. ಈ ಜಲಾಶಯಕ್ಕೆ ೫೦ ವರ್ಷಗಳು ತುಂಬಿವೆ. ಹಾಗಾಗಿ ಜಲಾಶಯವನ್ನು ಪುನಶ್ಚೇತನಗೊಳಿಸಿ, ಭದ್ರಪಡಿಸಬೇಕಾಗಿದೆ. ಹಾಗೆಂದ ಮಾತ್ರಕ್ಕೆ ಜಲಾಶಯ ಅಭದ್ರತೆಯಿಂದಿದೆ ಎಂದಲ್ಲ. ೫೦ ವರ್ಷವಾಗಿರುವ ಕಾರಣ ಈ ಜಲಾಶಯನ್ನು ಪುನಶ್ಚೇತನಗೊಳಿಸಬೇಕಾಗಿದ್ದು, ಅದಕ್ಕಾಗಿ ಮಲೆಮಹದೇಶ್ವರ ಬೆಟ್ಟದಲ್ಲಿ ಏಪ್ರೀಲ್ ೨೪ ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ೩೨.೨೫ ಕೋಟಿರೂಗಳ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಇನ್ನೂ ಅನೇಕ ಯೋಜನೆಗಳನ್ನು ಮಾಡಿದ್ದೇವೆ. ಈ ಜಲಾಶಯದ ಎದುರು ಬೃಂದಾವನ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು. ತಾರಕ ಜಲಾಶಯದ ನಾಲೆಗಳ ಆಧುನೀಕರಣ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.

‘ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರ ಅನುಮತಿ ನೀಡಿದರೆ, ಸಮಾನಾಂತರ ಜಲಾಶಯ ನಿರ್ಮಿಸಲಾಗುವುದು. ಗೋವಾ ಹಾಗೂ ಕೇಂದ್ರದಲ್ಲಿ ಬಿಜೆಪಿಯವರದ್ದೇ ಸರ್ಕಾರವಿದೆ. ಮಹಾದಾಯಿ ಮತ್ತು ಮೇಕೆದಾಟು ಯೋಜನೆಗೆ ಅನುಮತಿ ಕೊಡಿಸಲಿ’ ಎಂದು ಒತ್ತಾಯಿಸಿ, ಸವಾಲು ಹಾಕಿದರು.

ದೇವನಹಳ್ಳಿಯಲ್ಲಿ ರೈತರ ಹೋರಾಟಕ್ಕೆ ಮಣಿದು ಭೂಸ್ವಾಧೀನ ಕೈಬಿಟ್ಟಿರುವುದಕ್ಕೆ ಹಲವು ಕೈಗಾರಿಕೆಗಳು ಆಚಿಧ್ರಪ್ರದೇಶಕ್ಕೆ ಹೋಗುತ್ತಿರುವುದಕ್ಕೆ ಪ್ರತಿಕ್ರಿಯಿಸಿ, ನಾವು ಕೈಗಾರಿಕೆಗಳಿಗೆ ಜಮೀನು ಕೊಡಲ್ಲ ಎಂದು ಹೇಳಿಲ್ಲ, ಜಮೀನು ಕೊಡ್ತೀವಿ, ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ ಏನೇ ರಾಜಕೀಯ ಮಾಡಿದರೂ ನಮ್ಮ ರಾಜ್ಯದಿಂದ ಯಾವ ಕೈಗಾರಿಕೆಗಳೂ ಹೊರ ಹೋಗುವುದಿಲ್ಲ ಎಂದು ಹೇಳಿದರು. ಬಿಜೆಪಿಯವರು ಬಡವರು, ಅಭಿವೃದ್ಧಿ, ಸಾಮಾಜಿಕ ನ್ಯಾಯದ ವಿರೋಧಿಗಳು. ಹಾಗಾಗಿ ನಮ್ಮ ಸರ್ಕಾರದ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕಬಿನಿ ಜಲಾಶಯದಿಂದ ಏತ ನೀರಾವರಿ ಯೋಜನೆ, ಜಲಾಶಯದ ಗೇಟ್‌ಗಳ ಪುನಶ್ಚೇತನಕ್ಕೆ ತಯಾರಿ ಮಾಡಿಕೊಂಡಿದ್ದೇವೆ. ೮೮ ಕೋಟಿ ಬಿಡುಗಡೆಗೆ ಮಹದೇಶ್ವರ ಬೆಟ್ಟದಲ್ಲಿನಡೆದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಜಲಾಶಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ’ ಎಂದು ಹೇಳಿದರು. ಮೇಕೆದಾಟು ಯೋಜನೆ ಆದ ನಚಿತರ ಅಚ್ಚುಕಟ್ಟು ಪ್ರದೇಶವನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ. ಮಹದೇವಪ್ಪ, ಶಾಸಕರಾದ ಎ.ಆರ್.ಕೃಷ್ಣಮೂರ್ತಿ, ಅನಿಲ್ ಚಿಕ್ಕಮಾದು, ಕೆ.ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಮತ್ತಿತರರು ಉಪಸ್ಥಿತರಿದ್ದರು.

TAGGED:#Action #rehabilitation #Kabini #Reservoir #CM #Siddaramaiah
Share This Article
Facebook Twitter Copy Link Print
Previous Article Priyanka Chopra 43ರ ಪ್ರಿಯಾಂಕಾ ಚೋಪ್ರಾ ಹಾಟ್ ಫೋಟೋ ನೋಡಿ ಪಡ್ಡೆಹೈಕ್ಳು ಸುಸ್ತು!
Next Article Anushree ಒಳ್ಳೆಯವರಾಗಿದ್ರೂ ಆಡ್ಕೋತ್ತಾರೆ. ಕೆಟ್ಟವರಾಗಿದ್ರೂ ಆಡ್ಕೋತ್ತಾರೆ – ಹೀಗ್ಯಾಕಂದ್ರು ಅನುಶ್ರೀ?

Popular Posts

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

You Might Also Like

ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?