newsics.com
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎಸ್ಐಟಿಗೆ ವಹಿಸಿದೆ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದಾಖಲಾಗಿರುವ ಅಪರಾಧ ಮತ್ತು ‘ಕರ್ನಾಟಕ ರಾಜ್ಯದಾದ್ಯಂತ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ/ ದಾಖಲಾಗಲಿರುವ ಎಲ್ಲಾ ಇತರ ಕ್ರಿಮಿನಲ್ ಪ್ರಕರಣಗಳನ್ನು’ ತನಿಖೆ ಮಾಡಲು ‘ವಿಶೇಷ ತನಿಖಾ ತಂಡವನ್ನು ರಚಿಸುವುದು ಸೂಕ್ತ’ ಎಂದು ಶನಿವಾರ ಹೊರಡಿಸಲಾದ ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.
ಆರೋಪಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಡಾ.ಪ್ರಣವ್ ಮೊಹಂತಿ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿದೆ. ಎಸ್ಐಟಿ ಸದಸ್ಯರಾಗಿ ಅನುಚೇತ್, ಸೌಮ್ಯಲತಾ, ಜಿತೇಂದ್ರಕುಮಾರ್ ಕೂಡ ಇದ್ದಾರೆ. ಈ ವಿಶೇಷ ತನಿಖಾ ತಂಡವು ಕಳೆದ 20 ವರ್ಷಗಳಿಂದ ನಾಪತ್ತೆಯಾಗಿರುವ ಮಹಿಳೆಯರು, ವಿದ್ಯಾರ್ಥಿನಿಯರು, ಹಲ್ಲೆ, ಅತ್ಯಾ*ಚಾರ, ಅಸ್ವಾಭಾವಿಕ ಸಾ*ವಿನ ಬಗ್ಗೆ ತನಿಖೆ ನಡೆಸಲಿದೆ.
https://www.newsics.com/2025/07/20/don-director-chandra-barot-is-no-more/