Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 15 ವರ್ಷದ ಬಾಲಕಿ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು
ದೇಶಪ್ರಮುಖ

15 ವರ್ಷದ ಬಾಲಕಿ ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

Share
2 Min Read
SHARE

newsics.com

ಭುವನೇಶ್ವರ: ಲೈಂಗಿಕ ದೌರ್ಜನ್ಯವೆಸಗಿದ ಶಿಕ್ಷಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಒಡಿಶಾದ ವಿದ್ಯಾರ್ಥಿನಿಯೊಬ್ಬಳು ಕಾಲೇಜಿನಲ್ಲೇ ಮೈಗೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದ ಘಟನೆ ತಣ್ಣಗಾಗುವ ಮೊದಲೇ, ಒಡಿಶಾದ ಪುರಿ ಜಿಲ್ಲೆಯಲ್ಲಿ 15 ವರ್ಷದ ಹುಡುಗಿಯೊಬ್ಬಳ ಮೈಗೆ ಅಪರಿಚಿತರು ಬೆಂಕಿ ಹಚ್ಚಿ ಪರಾರಿಯಾದ ಹೃದಯವಿದ್ರಾವಕ ಘಟನೆ ಶನಿವಾರ ನಡೆದಿದೆ.
ಸಂತ್ರಸ್ತೆಯ ದೇಹದ ಶೇ.70ರಷ್ಟು ಭಾಗ ಸುಟ್ಟುಹೋಗಿದ್ದು, ಚಿಕಿತ್ಸೆಗಾಗಿ ಭುವನೇಶ್ವರದ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಗಿದ್ದೇನು?: ಪುರಿ ಜಿಲ್ಲೆಯ ಬಯಬರ್ ಗ್ರಾಮದ ನುಗೋಪಾಲಪುರ ಬಸ್ತಿಯ ಬಾಲಕಿ 8ನೇ ತರಗತಿ ಬಳಿಕ ಶಾಲೆ ಬಿಟ್ಟಿದ್ದಳು. ಆಕೆಯ ತಂದೆ ಸ್ಥಳೀಯ ವಾಹನ ರಿಪೇರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕಿ ಶನಿವಾರ ಬೆಳಿಗ್ಗೆ 9 ಗಂಟೆ ಸುಮಾರಿಗೆ ತನ್ನ ಗೆಳತಿಯ ಮನೆಗೆ ತೆರಳುತ್ತಿದ್ದಳು. ಆಗ ಬೈಕ್‌ನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಆಕೆಯನ್ನು ಅಡ್ಡಗಟ್ಟಿ ಬೆದರಿಸಿ ಒತ್ತಾಯದಿಂದ ಭಾರ್ಗವಿ ನದಿ ದಡಕ್ಕೆ ಕರೆದೊಯ್ದಿದ್ದಾರೆ. ಅಲ್ಲಿ ಅವಳ ದೇಹದ ಮೇಲೆ ಪೆಟ್ರೋಲ್‌ ಸಿಂಪಡಿಸಿ, ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಆಕೆಯ ಮನೆಯಿಂದ ಕೇವಲ 1.5 ಕಿ.ಮೀ. ದೂರದಲ್ಲಿ ಘಟನೆ ನಡೆದಿದೆ. ಬೆಂಕಿಯನ್ನು ಗಮನಿಸಿದ ಸ್ಥಳೀಯರು ತಕ್ಷಣ ಪಿಪಿಲಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಭುವನೇಶ್ವರದ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಾಲಕಿಯ ಬೆನ್ನು, ಹೊಟ್ಟೆ ಹಾಗೂ ಇತರ ಭಾಗಗಳು ಸುಟ್ಟಿವೆ. ಆದರೆ ಮಾತಾಡುವ ಸ್ಥಿತಿಯಲ್ಲಿದ್ದಾಳೆ. ಆಕೆಯ ಪಾಲಕರು ನೀಡಿದ ದೂರಿನನ್ವಯ ಬಾಲಂಗಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಪ್ರಕರಣದ ತನಿಖೆಗೆ 2 ತಂಡಗಳನ್ನು ರಚಿಸಲಾಗಿದ್ದು, ತನಿಖೆ ಈಗಾಗಲೇ ಆರಂಭವಾಗಿದೆ. ಅಪರಾಧಿಗಳಿಗೆ ಬಲೆ ಬೀಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ದುಷ್ಕರ್ಮಿಗಳು 15 ವರ್ಷದ ಬಾಲಕಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಸುದ್ದಿ ಕೇಳಿ ನನಗೆ ದುಃಖ ಮತ್ತು ಆಘಾತವಾಯಿತು. ಬಾಲಕಿಯ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ. ಅಪರಾಧಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ’ ಎಂದು ಒಡಿಶಾ ಉಪಮುಖ್ಯಮಂತ್ರಿ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಪ್ರವತಿ ಪರಿದಾ ತಿಳಿಸಿದ್ದಾರೆ. ವಿರೋಧ ಪಕ್ಷ ಬಿಜೆಡಿ ಮತ್ತು ಕಾಂಗ್ರೆಸ್ ನಿಯೋಗವು ಏಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಕುಟುಂಬಸ್ಥರು ಮತ್ತು ವೈದ್ಯರನ್ನು ಭೇಟಿ ಮಾಡಿದೆ.

ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಪ್ರವಾಸಿ ದೋಣಿ ಮುಳುಗಿ 34 ಮಂದಿ ಸಾವು

TAGGED:Miscreants pour petrol on 15-year-old girl and set her on fire
Share This Article
Facebook Twitter Copy Link Print
Previous Article ವಿಯೆಟ್ನಾಂನ ಹಾ ಲಾಂಗ್ ಕೊಲ್ಲಿಯಲ್ಲಿ ಪ್ರವಾಸಿ ದೋಣಿ ಮುಳುಗಿ 34 ಮಂದಿ ಸಾವು
Next Article Life style ಎರಡೇ ನಿಮಿಷದಲ್ಲಿ ನಿದ್ರೆಗೆ ಜಾರುವ ಮಿಲಿಟರಿ ಟ್ರಿಕ್; ತುಂಬಾ ಜನಕ್ಕೆ ಸೂಪರ್ ರಿಸಲ್ಟ್ ಸಿಕ್ಕಿದೆ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?