newsics.com
ರೇಣುಕಾಸ್ವಾಮಿ ಎಂಬ ಚಿತ್ರದುರ್ಗ ಮೂಲದ ವ್ಯಕ್ತಿಯ ಕೊಲೆ ಕೇಸ್ನಲ್ಲಿ, ದರ್ಶನ್ ತೂಗುದೀಪ್ ಸೇರಿದಂತೆ 17 ಜನ ಅರೆಸ್ಟ್ ಆಗಿದ್ದರು. ಇವರ ವಿಚಾರಣೆ ನಡೆದು ಸೆಂಟ್ರಲ್ ಜೈಲಿಗೆ ಕೂಡ ಕಳುಹಿಸಲಾಗಿತ್ತು. ಅಂತಿಮವಾಗಿ ಜಾಮೀನು ಪಡೆದು ಹೊರಗೆ ಬಂದಿದ್ದರು. ಇದೀಗ ನಟ ದರ್ಶನ್ ಸೇರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನು ಪ್ರಶ್ನಿಸಿ ಸರ್ಕಾರ ಅರ್ಜಿ ಸಲ್ಲಿಸಿದೆ.ಇದೀಗಸುಪ್ರೀಂಕೋರ್ಟ್ನಲ್ಲಿ ನಾಳೆ ( ಜುಲೈ 22) ನಟ ದರ್ಶನ್ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ.
ಜಾಮೀನು ನೀಡುವಾಗ ಹೈಕೋರ್ಟ್ ತನ್ನ ವಿವೇಚನೆಯನ್ನ ಸೂಕ್ತವಾಗಿ ಬಳಸಿಲ್ಲ ಎಂದು ನ್ಯಾ. ಪರ್ದಿವಾಲಾ ಆಕ್ಷೇಪಿಸಿದ್ದರು. ಈ ಬಗ್ಗೆ ಏನು ಹೇಳಬಯಸುತ್ತೀರಿ ಎಂದು ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ಗೆ ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಹೈಕೋರ್ಟ್ ಆದೇಶವನ್ನು ಹೇಗೆ ನೀಡಿದೆ ಎನ್ನುವುದನ್ನು ನೀವು ಗಮನಿಸಿರಬಹುದು ಎಂದು ಸಿಬಲ್ ಅವರಿಗೆ ಸುಪ್ರೀಂ ಕೋರ್ಟ್ ಹೇಳಿದೆ.
ಸದ್ಯದರ್ಶನ್ ಥೈ ಲ್ಯಾಂಡ್ನಲ್ಲಿ ಡೆವಿಲ್ ಸಿನಿಮಾದ ಶೂಟಿಂಗ್ನಲ್ಲಿದ್ದಾರೆ. ಸುಪ್ರೀಂಕೋರ್ಟ್ನಲ್ಲಿ ಜುಲೈ 22ರ ಮಂಗಳವಾರ ನಡೆಯುವ ಜಾಮೀನು ಅರ್ಜಿಯ ಮೇಲ್ಮನವಿ ವಿಚಾರಣೆಯು ನಟ ದರ್ಶನ್ ಪಾಲಿಗೆ ಮಹತ್ವದ್ದು.
ಪ್ರಕರಣದ ಹಿನ್ನೆಲೆಯಲ್ಲಿ, ಚಿತ್ರದುರ್ಗದ 33 ವರ್ಷದ ರೇಣುಕಾಸ್ವಾಮಿ ಎಂಬಾತನನ್ನು ಜೂನ್ 8, 2024ರಂದು ಕೊಲೆ ಮಾಡಲಾಗಿತ್ತು. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂಬ ಕಾರಣಕ್ಕೆ ದರ್ಶನ್ ಸಹಚರರು ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಿಸಿ, ಬೆಂಗಳೂರಿನ ಶೆಡ್ವೊಂದರಲ್ಲಿ ಮೂರು ದಿನಗಳ ಕಾಲ ಚಿತ್ರಹಿಂಸೆ ನೀಡಿ ಕೊಲೆಗೈದಿದ್ದ ಆರೋಪವಿದೆ. ಜೂನ್ 9ರಂದು ರೇಣುಕಾಸ್ವಾಮಿಯ ಮೃತದೇಹ ಬೆಂಗಳೂರಿನ ಸುಮನಹಳ್ಳಿ ಬಳಿಯ ಒಳಚರಂಡಿಯಲ್ಲಿ ಪತ್ತೆಯಾಗಿತ್ತು.