newsics.com
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿದೆ. ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗುವ ಹಿನ್ನೆಲೆಯಲ್ಲಿ, ಕರ್ನಾಟಕ ಕರಾವಳಿ ಭಾಗದದ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು 1 ವಾರಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ವರುಣಾರ್ಭಟ ಜೋರಾಗಲಿದ್ದು, ಭೂಕುಸಿತದಂತಹ ಅನಾಹುತ ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲೂ ಭಾರೀ ಮಳೆಯಾಗೋ ಸಾಧ್ಯತೆ ಇದೆ ಎನ್ನಲಾಗ್ತಿದೆ. ಬೆಂಗಳೂರು ಸೇರಿ ಉಳಿದೆಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ನೀಡಿದೆ.
ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದೆ.