newsics.com
ಹೈದರಾಬಾದ್: ಬೆಟ್ಟಿಂಗ್ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ನಟಿಯರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ಜಾರಿ ಮಾಡಿದೆ.
ಈ ಪ್ರಕರಣ ಸಂಬಂಧ ನಟ-ನಟಿಯರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್, ಪ್ರಣೀತಾ ಸುಭಾಶ್ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿತ್ತು. ಬೇಡ
ತೆಲಂಗಾಣದ ಸಾಮಾಜಿಕ ಜಾಲತಾಣಗಳ ಇನ್‌ಫ್ಲೂಯೆನ್ಸರ್‌ಗಳು, ಯೂಟ್ಯೂಬರ್‌ಗಳನ್ನು ಪ್ರಕರಣದಲ್ಲಿ ಹೆಸರಿಸಲಾಗಿದೆ.
ರಾಣಾ ದಗ್ಗುಬಾಟಿ, ವಿಜಯ ದೇವರಕೊಂಡ, ಪ್ರಕಾಶ್ ರಾಜ್, ಮಂಚುಲಕ್ಷ್ಮಿ ಅವರಿಗೆ ಇಡಿ ನೋಟಿಸ್ ಜಾರಿಗೊಳಿಸಿದೆ. ಜುಲೈ 23 ರಂದು ವಿಚಾರಣೆಗೆ ಹಾಜರಾಗಲು ರಾಣಾ ದಗ್ಗುಬಾಟಿಗೆ ಸೂಚನೆ ನೀಡಲಾಗಿದೆ.
ಇನ್ನು ಜಾರಿ ನಿರ್ದೇಶನಾಲಯವು ಗೂಗಲ್ ಮತ್ತು ಮೆಟಾ ಕಂಪನಿಗಳ ಪ್ರತಿನಿಧಿಗಳಿಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿ ಮಾಡಿದೆ.
https://www.newsics.com/2025/07/21/cbse-makes-cctv-cameras-mandatory-in-schools/