newsics.com
ನವದೆಹಲಿ: ಸಂಸತ್ನ ಮುಂಗಾರು ಅಧಿವೇಶನ ಸೋಮವಾರ ಆರಂಭವಾಗಲಿದ್ದು, ಆಪರೇಷನ್ ಸಿಂದೂರ ಕಾರ್ಯಾಚರಣೆ ಹಾಗೂ ಭಾರತ-ಪಾಕ್ ಸಂಘರ್ಷದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ.
ಏರ್ ಇಂಡಿಯಾ ವಿಮಾನ ದುರಂತ, ಆಪರೇಷನ್ ಸಿಂದೂರ, ಭಾರತ-ಪಾಕ್ ಕದನ ವಿರಾಮ ಕುರಿತು ಟ್ರಂಪ್ ಹೇಳಿಕೆ, ಬಿಹಾರ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸೇರಿದಂತೆ ಹಲವು ವಿಚಾರಗಳನ್ನು ಸರಕಾರದ ವಿರುದ್ಧ ಅಸ್ತ್ರವಾಗಿ ಬಳಸಲು ವಿಪಕ್ಷಗಳ ಐಎನ್ಡಿಐಎ ಒಕ್ಕೂಟ ಸಜ್ಜಾಗಿದೆ.
ಆಗಸ್ಟ್ 12ರ ವರೆಗೆ ಅಧಿವೇಶನ ನಡೆಯಲಿದ್ದು, ಉಭಯ ಸದನಗಳಲ್ಲಿ ಒಟ್ಟಾರೆ 21 ದಿನ ಕಲಾಪ ನಡೆಯಲಿದೆ. ಆ.12ರಿಂದ ಆ.18ರ ವರೆಗೆ ಕಲಾಪಕ್ಕೆ ವಿರಾಮ ನೀಡಲಾಗಿದೆ. ಈ ಅಧಿವೇಶನದಲ್ಲಿ 8 ಹೊಸ ಮಸೂದೆಗಳನ್ನು ಮಂಡಿಸಲು ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
Karnataka Rains: ಕರ್ನಾಟಕದಾದ್ಯಂತ ಮಳೆ ಅಬ್ಬರಕ್ಕೆ ಒಂದೇ ದಿನ ಐವರು ಸಾವು