newsics.com
ನವದೆಹಲಿ: ಅಚ್ಚರಿಯ ಬೆಳವಣಿಗೆಯಲ್ಲಿ ದಿಢೀರನೆ ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆ ಪಾಲಿಸುವ ಅಗತ್ಯ ಉಲ್ಲೇಖಿಸಿರುವ ಜಗದೀಪ್ ಧನ್ಖರ್ ಅವರು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ರಾಜೀನಾಮೆ ಭಾರತದ ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿದೆ ಎಂದು ಜಗದೀಪ್ ಧನ್ಖರ್ ಹೇಳಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದ ಪತ್ರದಲ್ಲಿ ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಜಗದೀಪ್ ಧನ್ಖರ್, ರಾಷ್ಟ್ರಪತಿಗಳ ಬೆಂಬಲ ಮತ್ತು ತಮ್ಮ ಅಧಿಕಾರಾವಧಿಯಲ್ಲಿ ಅವರು ಹಂಚಿಕೊಂಡ ಸೌಹಾರ್ದಯುತ ಕಾರ್ಯ ಸಂಬಂಧಕ್ಕಾಗಿ ಧನ್ಯವಾದ ಅರ್ಪಿಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಸಚಿವ ಸಂಪುಟಕ್ಕೆ ಅವರು ತಮ್ಮ ಕೃತಜ್ಞತೆಯನ್ನು ವ್ಯಕ್ತಪಡಿಸಿದರು. ಪ್ರಧಾನಿಯವರ ಸಹಕಾರ ಮತ್ತು ಬೆಂಬಲ ಅಮೂಲ್ಯವಾದುದು. ನನ್ನ ಅಧಿಕಾರದ ಅವಧಿಯಲ್ಲಿ ಬಹಳಷ್ಟು ಕಲಿತಿದ್ದೇನೆ ಎಂದು ಅವರು ಹೇಳಿದ್ದಾರೆ.