newsics.com
ಬೆಂಗಳೂರು: ರಾಜ್ಯದಲ್ಲಿರುವ ಎಲ್ಲಾ ಅರಣ್ಯ ಪ್ರದೇಶದೊಳಗೆ ದನ, ಕರು, ಮೇಕೆ, ಹಾಗೂ ಕುರಿ ಮೇಯಿಸುವುದನ್ನು ನಿಷೇಧಿಸಲು ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ.
ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಆಗಷ್ಟೇ ಮೊಳಕೆಯೊಡೆದ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೆ ಅರಣ್ಯ ಸಂವರ್ಧನೆಗೆ ಅಡ್ಡಿಯಾಗಿದೆ.
ದೊಡ್ಡ ಸಂಖ್ಯೆಯಲ್ಲಿ ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತಿದೆ. ಅರಣ್ಯ ಸಂವರ್ಧನೆಯಾಗದಿದ್ದರೆ ನದಿಗಳ ಮೇಲೆಯೂ ಪರಿಣಾಮ ಬೀರುತ್ತದೆ. ಹೀಗಾಗಿ ಅರಣ್ಯ ಪ್ರದೇಶದಲ್ಲಿ ಜಾನುವಾರು ಮೇಯುವುದನ್ನು ನಿಷೇಧಿಸುವ ಬಗ್ಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎನ್ನಲಾಗಿದೆ.