newsics.com
ಪ್ರೀತಿಯ ಹೆಸರಲ್ಲಿ ಮಹಿಳೆಗೆ ವಂಚಿಸಿದ್ದಷ್ಟೇ ಅಲ್ಲದೇ ಆಕೆಯನ್ನು ಕೊಲೆ ಮಾಡಲು ಯತ್ನಿಸಿರುವ ಘಟನೆ ದೊಡ್ಡಬಳ್ಳಾಪುರ ನಗರದ ಕರೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಜಿಮ್ ಟ್ರೈನರ್ ಗೌತಮ್ ಹಾಗೂ ಪವಿತ್ರಾ ಎಂಬಾಕೆ ಕಳೆದ 8 ವರ್ಷಗಳಿಂದ ಪ್ರೀತಿಸುತ್ತಿದ್ದ. ಗೌತಮ್ ಪ್ರೀತಿಸಿ ಮಹಿಳೆಯನ್ನು ಗರ್ಭಿಣಿ ಮಾಡಿದ ನಂತರ ನಾನು ನಿನ್ನನ್ನು ಮದುವೆಯಾಗಲ್ಲ ಎಂದು ಹೇಳಿದ್ದಾನೆ. ಇಷ್ಟು ಮಾತ್ರವಲ್ಲದೆ ಆತನ ಕುಟುಂಬಸ್ಥರು ಸೇರಿ ಪವಿತ್ರಾ ಹಾಗೂ ಮಗುವನ್ನ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.ಬಳಿಕ ನ್ಯಾಯಕ್ಕಾಗಿ ಸಂತ್ರಸ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಳು.
ಈ ಕೇಸ್ ವಾಪಸ್ ಪಡೆಯುವಂತೆ ಮಹಿಳೆ ಬಳಿ ಕುಟುಂಬಸ್ಥರು ಮಾತುಕತೆ ನಡೆಸಿದ್ರು. ರಾಜಿ ಪಂಚಾಯತಿ ನಡೆಸಲು ಮನೆಗೆ ಕರೆದುಕೊಂಡು ಹೋಗಿದ್ದಾರೆ. ಆದ್ರೆ ಮಹಿಳೆ ಮತ್ತು ಮಗುವನ್ನ 20 ದಿನಗಳಿಂದ ಮನೆಯಲ್ಲೇ ಇರಿಸಿಕೊಂಡು ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಗೌತಮ್ ವರ್ಷಕ್ಕೊಬ್ಬಳ ಜೊತೆ ಆಫೇರ್ ಇಟ್ಟುಕೊಂಡಿದ್ದ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಈಗ ನಮಗೆ ನ್ಯಾಯ ಕೊಡಿಸಿ ಎಂದು ಹಲ್ಲೆಗೊಳಗಾದ ಸಂತ್ರಸ್ತ ಮಹಿಳೆ ಆಗ್ರಹಿಸಿದ್ದಾರೆ.
https://www.newsics.com/2025/07/22/fire-breaks-out-on-the-thalaguppa-mysore-kuvempu-express-train/