newsics.com
ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನ್ಕರ್ ರಾಜೀನಾಮೆ ನಿನ್ನೆ ನೀಡಿದ್ದು, ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ರಾಜೀನಾಮೆ ಅಂಗೀಕರಿಸಿದ್ದಾರೆ.
ಸಂವಿಧಾನದ 67(a) ವಿಧಿಯ ಪ್ರಕಾರ ʻಆರೋಗ್ಯ ಸಮಸ್ಯೆ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸಲು ತಕ್ಷಣದಿಂದಲೇ ಜಾರಿಗೆ ಬರುವಂತೆ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆʼ ಎಂದು ಜಗದೀಪ್ ಧಂಕರ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ತಮ್ಮ ಅಧಿಕಾರಾವಧಿಯಲ್ಲಿ ದೊರೆತ ಅಚಲವಾದ ಬೆಂಬಲ ಮತ್ತು ಹಿತವಾದ ಅದ್ಬುತ ಕಾರ್ಯ ಸಂಬಂಧಕ್ಕಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
https://www.newsics.com/2025/07/22/nurse-minut-priyas-death-sentence-should-be-quashed-dr-paul/