newsics.com
ಚಿಕ್ಕಬಳ್ಳಾಪುರ: ಲಾರಿ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗರ್ಭಿಣಿ ಸೇರಿ ಇಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಪೌರ ತಾಲೂಕಿನ ಗೌರಿಬಿದನೂರಿನ ಕುಡಮಲಕುಂಟೆ ಬಳಿ ನಡೆದಿದೆ.’
ಘಟನೆಯಲ್ಲಿ ಐದು ತಿಂಗಳ ಗರ್ಭಿಣಿ ನೂರಿ (35) ಹಾಗೂ ಪತಿ ಯಾಸಿನ್ ಖಾನ್ (45) ಮೃತಪಟ್ಟವರು.
ಮೃತ ದಂಪತಿ ಸಂಬಂಧಿಕರ ಮನೆಗೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗೌರಿಬಿದನೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.