Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DHARMASTHALA CRIME ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಖಡಕ್ ಅಧಿಕಾರಿಗಳ ನೇಮಕ
ಕರ್ನಾಟಕಪ್ರಮುಖ

DHARMASTHALA CRIME ಧರ್ಮಸ್ಥಳ ಪ್ರಕರಣ: ಎಸ್‌ಐಟಿ ತಂಡಕ್ಕೆ ಹೆಚ್ಚುವರಿ 20 ಖಡಕ್ ಅಧಿಕಾರಿಗಳ ನೇಮಕ

Share
2 Min Read
SHARE

newsics.com

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡಕ್ಕೆ(ಎಸ್‌ಐಟಿ) ಅಧಿಕಾರಿಗಳನ್ನು ನಿಯೋಜನೆ ಮಾಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಮಹಾ ನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿ ಭಾನುವಾರ ಸರ್ಕಾರ ಆದೇಶ ಹೊರಡಿಸಿತ್ತು. ಈ ತಂಡದಲ್ಲಿ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್‌.ಅನುಚೇತ್‌, ಸಿಎಆರ್ ಕೇಂದ್ರದ ಡಿಸಿಪಿ ಸೌಮ್ಯಲತಾ ಮತ್ತು ಆಂತರಿಕ ಭದ್ರತಾ ವಿಭಾಗದ ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರು ಸದಸ್ಯರಾಗಿದ್ದಾರೆ.

ತಂಡದಲ್ಲಿರುವ ಅಧಿಕಾರಿಗಳು, ಸಿಬ್ಬಂದಿ: ಮಂಗಳೂರು ಡಿಸಿಆರ್‌ಇ ಎಸ್‌ಪಿ ಸಿ.ಎ.ಸೈಮನ್, ಉಡುಪಿ ಸಿಎಎನ್ ಠಾಣೆಯ ಡಿವೈಎಸ್ಪಿ ಎ.ಸಿ.ಲೋಕೇಶ್, ದಕ್ಷಿಣ ಕನ್ನಡ ಸಿಇಎನ್ ಠಾಣೆಯ ಡಿವೈಎಸ್‌ಪಿ ಮಂಜುನಾಥ್, ಸಿಎಸ್‌ಪಿ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥ್, ಸಿಎಸ್‌ಪಿ ಇನ್‌ಸ್ಪೆಕ್ಟರ್ ಇ.ಸಿ.ಸಂಪತ್, ಸಿಎಸ್‌ಪಿ ಪೊಲೀಸ್ ಇನ್‌ಸ್ಪೆಕ್ಟರ್ ಕೆ.ಕುಸುಮಧರ್, ಉತ್ತರ ಕನ್ನಡದ ಶಿರಸಿ ಗ್ರಾಮಾಂತರ ಪೊಲೀಸ್ ಇನ್‌ಸ್ಪೆಕ್ಟರ್ ಮಂಜುನಾಥಗೌಡ, ಉಡುಪಿ, ಬೈಂದೂರು ಇನ್‌ಸ್ಪೆಕ್ಟರ್ ಪಿ.ಡಿ.ಸವಿತ್ರ ತೇಜ್, ಸಿಎಸ್‌ಪಿ ಸಬ್‌ ಇನ್‌ಸ್ಪೆಕ್ಟರ್ ಕೋಕಿಲ ನಾಯಕ್, ಸಿಎಸ್‌ಪಿ ಸಬ್‌ ಇನ್‌ಸ್ಪೆಕ್ಟರ್ ಶಿವಶಂಕರ್, ಉತ್ತರ ಕನ್ನಡ, ಶಿರಸಿ ಎನ್‌ಎಂ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಜ್‌ಕುಮಾರ್ ಉಕ್ಕಳ್ಳಿ, ಉತ್ತರ ಕನ್ನಡ ಅಂಕೋಲ ಪೊಲೀಸ್ ಠಾಣೆಯ ಸಬ್‌ ಇನ್‌ಸ್ಪೆಕ್ಟರ್ ಆರ್.ಸುಹಾಸ್, ಉತ್ತರ ಕನ್ನಡ ಮುಂಡಗೋಡ ಸಬ್‌ ಇನ್‌ಸ್ಪೆಕ್ಟರ್ ವಿನೋದ್ ಎಸ್.ಕಾಳಪ್ಪನವರ್, ಮಂಗಳೂರು ಮೆಕ್ಸಾಂ ಠಾಣೆಯ ಪಿಎಸ್‌ಐ ಜೆ.ಗುಣಪಾಲ್, ಉಡುಪಿ ನಗರ ಪೊಲೀಸ್ ಠಾಣೆಯ ಎಎಸ್‌ಐ ಶುಭಾಷ್ ಕಾಮತ್, ಉಡುಪಿ ಕೌಪ್ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಹರೀಶ್‌ಬಾಬು, ಉಡುಪಿ ಮಲ್ಪೆ ವೃತ್ತದ ಹೆಡ್‌ ಕಾನ್‌ಸ್ಟೆಬಲ್ ಪ್ರಕಾಶ್, ಉಡುಪಿ ಕುಂದಾಪುರ ನಗರ ಠಾಣೆಯ ನಾಗರಾಜ್ ಮತ್ತು ಚಿಕ್ಕಮಗಳೂರಿನ ಎಎಂಎಸ್ ಹೆಡ್‌ ಕಾನ್‌ಸ್ಟೆಬಲ್ ದೇವರಾಜ್ ಅವರನ್ನು ಎಸ್‌ಐಟಿಗೆ ನಿಯೋಜಿಸಿ ಆದೇಶಿಸಲಾಗಿದೆ.

ಎಸ್‌ಐಟಿಗೆ ಪೂರ್ಣ ಪ್ರಮಾಣದಲ್ಲಿ ಅಧಿಕಾರಿಗಳು ಹಾಗೂ ಸಿಬ್ಭಂದಿಯನ್ನು ನಿಯೋಜಿಸಲಾಗಿದೆ. ಈ ತಂಡವು ಶೀಘ್ರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಗೆ ತೆರಳಿ ತನಿಖೆ ನಡೆಸಲಿದೆ. ಧರ್ಮಸ್ಥಳ ಅಥವಾ ಉಜಿರೆ ಸಮೀಪದಲ್ಲಿ ಎಸ್‌ಐಟಿ ಕಾರ್ಯ ಚಟುವಟಿಕೆಗೆ ಕಚೇರಿ ತೆರೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

Borewell Fee: ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ; ಇನ್ಮುಂದೆ ಡಿಜಿಟಲ್ ಟೆಲಿಮೆಟ್ರಿ ಬರಲಿದೆ

TAGGED:DHARMASTHALA CRIME Dharmasthala case: 20 additional officers appointed to the SIT team!
Share This Article
Facebook Twitter Copy Link Print
Previous Article Borewell Fee: ಕೊಳವೆ ಬಾವಿ ನೀರು ಬಳಕೆಗೂ ಶುಲ್ಕ; ಇನ್ಮುಂದೆ ಡಿಜಿಟಲ್ ಟೆಲಿಮೆಟ್ರಿ ಬರಲಿದೆ
Next Article BIKLU SHIVA CASE : ಬಿಕ್ಲು ಶಿವ ಕೊಲೆ ಪ್ರಕರಣ; ಇಂದು ಬೈರತಿಗೆ ಮತ್ತೆ ವಿಚಾರಣೆ

Popular Posts

Mansoon Updats ISRO ಉಪಗ್ರಹ ಸೆರೆಹಿಡಿದ ಅಪರೂಪದ ಚಿತ್ರ; ಭಾರತದ 95% ಭಾಗ ದಟ್ಟ ಮಳೆಮೋಡಗಳ ಹೊದಿಕೆಯಲ್ಲಿ, ಮುಂಗಾರು ಮತ್ತಷ್ಟು ಬಿರುಸು

2 Min Read

CWG 2026: ಲವ್ಲಿನಾ ಬೊರ್ಗೊಹೈನ್‌ಗೆ ಭಾರತದ ಮೊದಲ ಪದಕ ಖಚಿತ

2 Min Read

Election Commission SIR Updates ಕರ್ನಾಟಕದಲ್ಲಿ 52.97 ಲಕ್ಷ ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಕೈಬಿಡುವ ಸಾಧ್ಯತೆ

3 Min Read

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

You Might Also Like

ಕರ್ನಾಟಕಪ್ರಮುಖ

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read
ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?