Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala case ಎಸ್ಐಟಿಯಿಂದ ಹೊರಬರಲು ಬಯಸಿದ ಇಬ್ಬರು ಅಧಿಕಾರಿಗಳನ್ನು ಕೈಬಿಡಲು ಸರ್ಕಾರ ನಿರ್ಧಾರ
ಕರ್ನಾಟಕಪ್ರಮುಖ

Dharmasthala case ಎಸ್ಐಟಿಯಿಂದ ಹೊರಬರಲು ಬಯಸಿದ ಇಬ್ಬರು ಅಧಿಕಾರಿಗಳನ್ನು ಕೈಬಿಡಲು ಸರ್ಕಾರ ನಿರ್ಧಾರ

Share
2 Min Read
SHARE

newsics.com

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಿಚಿತ ಮೃತದೇಹಗಳ ಅಂತ್ಯಕ್ರಿಯೆ ಪ್ರಕರಣ ಸಂಬಂಧ ರಚನೆಯಾಗಿರುವ ಎಸ್‌ಐಟಿ ತಂಡದಿಂದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಹೊರಬರುವುದು ಬಹುತೇಕ ಖಚಿತವಾಗಿದೆ.

ಇದರ ಬೆನ್ನಲ್ಲೇ ಮತ್ತೊಬ್ಬ ನಾನ್‌ ಐಪಿಎಸ್‌ ಅಧಿಕಾರಿ ಕೂಡ ಈ ತಂಡದಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.

ವೈಯಕ್ತಿಕ ಕಾರಣ ನೀಡಿದ ಅಧಿಕಾರಿ ಮನವಿಯನ್ನು ಸಕಾರಾತ್ಮಕವಾಗಿ ಸ್ವೀಕರಿಸಿದ ರಾಜ್ಯ ಪೊಲೀಸ್ ಇಲಾಖೆ, ಈ ಅಧಿಕಾರಿಯನ್ನು ಎಸ್‌ಐಟಿಯಿಂದ ಕೈ ಬಿಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈಗ ಎಸ್‌ಐಟಿಯಿಂದ ಅಧಿಕಾರಿಯನ್ನು ಬಿಡುಗಡೆಗೆ ಸರ್ಕಾರ ತೀರ್ಮಾನಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಐಪಿಎಸ್ ಅಧಿಕಾರಿಗಳ ಅಸಮ್ಮತಿ ಬೆನ್ನಲ್ಲೇ ಎಸ್‌ಐಟಿಗೆ ಆಯ್ಕೆಯಾದ ನಾನ್‌ ಐಪಿಎಸ್ ಅಧಿಕಾರಿಯೊಬ್ಬರು ಸಹ ಹೊರಬರಲು ಮುಂದಾಗಿದ್ದಾರೆ. ಈ ಕುರಿತು ಡಿಜಿ-ಐಜಿಪಿ ಅವರನ್ನು ಇಂದು ಅಧಿಕಾರಿ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಎಸ್‌ಐಟಿ ರಚನೆಯಾದ ಬಳಿಕ ನಗರದ ಅರಮನೆ ರಸ್ತೆಯ ಸಿಐಡಿ ಕೇಂದ್ರ ಕಚೇರಿಯಲ್ಲಿ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನೇತೃತ್ವದಲ್ಲಿ ಮೊದಲ ಸಭೆ ನಡೆಯಿತು. ಈ ಸಭೆಗೆ ಎಸ್‌ಐಟಿಯಿಂದ ಹೊರಬರಲು ಮುಂದಾಗಿದ್ದ ಇಬ್ಬರು ಐಪಿಎಸ್ ಅಧಿಕಾರಿಗಳ ಪೈಕಿ ಒಬ್ಬರು ಹಾಗೂ ನಾನ್‌ ಐಪಿಎಸ್ ಅಧಿಕಾರಿ ಸಹ ಗೈರಾಗಿದ್ದರು. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಆ ಇಬ್ಬರು ಅಧಿಕಾರಿಗಳ ಹೆಸರುಗಳನ್ನು ಕೈಬಿಡುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬಂದಿವೆ.

ಎಸ್‌ಪಿ ಮಟ್ಟದ ತನಿಖಾಧಿಕಾರಿ?:
ಪ್ರಕರಣದ ತನಿಖೆಗೆ ಎಸ್ಪಿ ಮಟ್ಟದ ಅಧಿಕಾರಿಯನ್ನು ಮುಖ್ಯ ತನಿಖಾಧಿಕಾರಿಯಾಗಿ ನೇಮಿಸುವ ಬಗ್ಗೆ ಚರ್ಚೆ ನಡೆದಿದೆ. ಕೆಲ ಅಧಿಕಾರಿಗಳ ಗೈರುಹಾಜರಾತಿ ಹಿನ್ನೆಲೆಯಲ್ಲಿ ಎಸ್ಐಟಿ ಮೊದಲ ಸಭೆಯಲ್ಲಿ ತನಿಖಾಧಿಕಾರಿ ನೇಮಕವಾಗಿಲ್ಲ. ಮತ್ತೆ ಎಸ್‌ಐಟಿ ಸಭೆ ನಡೆಸಿ ತನಿಖಾಧಿಕಾರಿ ಹೆಸರನ್ನು ಅಂತಿಮಗೊಳಿಸಲಿದೆ ಎಂದು ತಿಳಿದು ಬಂದಿದೆ.

20 ಜನರ ತನಿಖಾ ತಂಡ ರಚನೆ

ಎಸ್‌ಐಟಿಗೆ ಐಪಿಎಸ್ ಅಧಿಕಾರಿಗಳ ನೇಮಕ ಬೆನ್ನಲ್ಲೇ ತನಿಖೆಗೆ ನೆರವಾಗುವ ಕೆಳಹಂತದ 20 ಅಧಿಕಾರಿ -ಸಿಬ್ಬಂದಿಯನ್ನು ತಂಡಕ್ಕೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ನಿಯೋಜಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಡಿಸಿಆರ್‌ಇ ಎಸ್ಪಿ ಸಿ.ಎ.ಸೈಮನ್, ಉಡುಪಿ ಸಿಇಎನ್‌ ಠಾಣೆಯ ಡಿವೈಎಸ್ಪಿ ಎ.ಸಿ.ಲೋಕೇಶ್‌ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಿಇಎನ್‌ ಠಾಣೆ ಡಿವೈಎಸ್ಪಿ ಮಂಜುನಾಥ್ ಸೇರಿ ಇತರೆ ಅಧಿಕಾರಿ – ಸಿಬ್ಬಂದಿಯನ್ನು ಡಿಜಿಪಿ ನೇಮಿಸಿದ್ದಾರೆ.

pregnant in space ಬಾಹ್ಯಾಕಾಶದಲ್ಲಿ ಗರ್ಭ ಧರಿಸಿದರೆ ಏನಾಗತ್ತೆ? ನಾಸಾ ಹೇಳಿದ್ದೇನು?

Rain alert ರಾಜ್ಯಾದ್ಯಂತ ಭಾರೀ ಮಳೆ : ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

TAGGED:Dharmasthala case: Two investigating officers set to withdraw from the investigation?
Share This Article
Facebook Twitter Copy Link Print
Previous Article Rain alert ರಾಜ್ಯಾದ್ಯಂತ ಭಾರೀ ಮಳೆ : ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Next Article BAMUL ಗುಡ್ ನ್ಯೂಸ್; ಇನ್ಮುಂದೆ ಶಾಲಾ ಮಕ್ಕಳಿಗೆ ಫ್ಲೇವರ್ಡ್ ನಂದಿನಿ ಹಾಲು ಪೂರೈಕೆ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?